ಬೆಂಗಳೂರು : ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧ ಸಿಬಿಐ ತನಿಖೆಗೆ ತಡೆ ನೀಡಿದ್ದ ರಾಜ್ಯ ಸರ್ಕಾರದ ನಿರ್ಧಾರವನ್ನು ಕರ್ನಾಟಕ ಹೈಕೋರ್ಟ್ ಬುಧವಾರ ಎತ್ತಿ ಹಿಡಿದಿದೆ.
ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅರ್ಜಿ ಸಲ್ಲಿಸಿದ್ದರು.
ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ನೇತೃತ್ವದ ವಿಭಾಗೀಯ ಪೀಠ, ರಾಜ್ಯ ಸರ್ಕಾರದ ಆದೇಶವನ್ನು ಇದುವರೆಗೂ ಯಾರೂ ಪ್ರಶ್ನೆ ಮಾಡಿಲ್ಲ. ಹೀಗಾಗಿ ಸಿಬಿಐ ಪರ ವಕೀಲರ ವಾದ ಪರಿಗಣಿಸಲು ಸಾಧ್ಯವಿಲ್ಲ. ಅರ್ಜಿದಾರರು ಮನವಿ ಹಿಂಪಡೆಯಲಾಗಿದೆ ಎಂದು ಕೋರ್ಟ್ ತಿಳಿಸಿತು.
Advertisement. Scroll to continue reading.
ಇನ್ನು ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಬಿಜೆಪಿ ಸರ್ಕಾರ ತಮ್ಮ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಪ್ರಶ್ನಿಸಿ ಡಿಕೆ ಶಿವಕುಮಾರ್ ಅವರು ಮೇಲ್ಮನವಿ ಅರ್ಜಿಯನ್ನು ಹಿಂಪಡೆಯಲು ಹೈಕೋರ್ಟ್ ಅನುಮತಿ ನೀಡಿದೆ.
In this article:CBI, cm siddaramaiyya, congress, d k shivakumar, high court, Karnataka government
Click to comment