ವರದಿ : ದಿನೇಶ್ ರಾಯಪ್ಪನಮಠ
ಕೊಲ್ಲೂರು : ಇಂದು ಎಲ್ಲರ ಸಹಕಾರದಿಂದ ಕಾರ್ಯಕ್ರಮ ಯಶಸ್ವಿಯಾಗಿದೆ, ಇಲ್ಲಿ ಬಹುಮಾನವನ್ನು ಸ್ವೀಕರಿಸಿದ ಎಲ್ಲಾ ವಿದ್ಯಾರ್ಥಿಗಳಿಗೆ ಧನ್ಯವಾದ ಹೇಳಲು ಇಚ್ಚಿಸುತ್ತೇನೆ. ಸೋತ ವಿದ್ಯಾರ್ಥಿಗಳಿಗೆ ಮುಂದಿನ ಗೆಲುವು ನಿಮ್ಮದಾಗಲಿ.
ಯಾವುದೇ ಕ್ರೀಡೆಯಲ್ಲಿ ಯಶಸ್ಸು ಗಳಿಸಬೇಕಾದರೆ ಅದರ ಹಿಂದೆ ಸಾಧನೆ ಇದೆ, ಸಾಧನೆ ಎನ್ನುವುದು ಸಾಧಕರ ಸೊತ್ತು, ನಿರಂತರ ಪ್ರಯತ್ನದಿಂದ ಅಭ್ಯಾಸವನ್ನು ಮಾಡಿದರೆ ಈ ರೀತಿಯ ಸಾಧನೆ ಮಾಡಲು ಸಾಧ್ಯ, ಓದಿನ ಜೊತೆಗೆ ಕ್ರೀಡೆಯನ್ನು ಜೀವನದಲ್ಲಿ ತೊಡಗಿಸಿಕೊಳ್ಳಬೇಕು, ಪ್ರತಿಯೊಬ್ಬರಲ್ಲೂ ಕೂಡ ಪ್ರತಿಭೆ ಇರುತ್ತದೆ ಅದು ವಿದ್ಯಾರ್ಥಿ ಜೀವನದಲ್ಲೇ ಇರುತ್ತದೆ ಅದನ್ನು ಹೊರತರುವಲ್ಲಿ ಶಿಕ್ಷಕರ ಪಾತ್ರ ಅತೀ ಮುಖ್ಯ ಎಂದು ಶ್ರೀ ಮೂಕಾಂಬಿಕಾ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ ಇವರು ಕೊಡ್ಲಾಡಿ ಶಾಲೆಯಲ್ಲಿ ಕ್ರೀಡಾಕೂಟದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಉಡುಪಿ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಬೈಂದೂರು ಮತ್ತು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಳದ ಪ್ರೌಢ ಶಾಲೆ ಕೊಡ್ಲಾಡಿ ಇವರ ಸಹಯೋಗದಲ್ಲಿ ನಡೆದ ಬೈಂದೂರು ವಲಯದ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿದ್ಯಾರ್ಥಿಗಳ ಕ್ರೀಡಾಕೂಟದ ಸಮಾರೋಪ ಸಮಾರಂಭ ಶನಿವಾರ ನಡೆಯಿತು.
ಮುಖ್ಯ ಅತಿಥಿಗಳಾಗಿ ಕೊಲ್ಲೂರು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ರತ್ನಾ ರಮೇಶ್, ಗೋಪಾಲಕೃಷ್ಣ, ಡಾ| ಅತುಲ್ ಕುಮಾರ್ ಶೆಟ್ಟಿ, ಜಯಾನಂದ ಹೋಬಳಿದಾರ್, ಸ್ಪೆöÊನ್ಕೇರ್ ಅಂಡ್ ಆರ್ಥೋಕೇರ್ ಹಾಸ್ಪಿಟಲ್ ಬೆಂಗಳೂರು ಇದರ ಡಾ| ಸುರೇಂದ್ರ ಶೆಟ್ಟಿ ಕೊಡ್ಲಾಡಿ, ಆಜ್ರಿ ಗ್ರಾಮ ಪಂಚಾಯತ್ ಉಪಾದ್ಯಕ್ಷೆ ಮುಕಾಂಬು ಶೆಡ್ತಿ, ನ್ಯಾಯವಾದಿ ಪ್ರಸನ್ನ ಕುಮಾರ್ ಶೆಟ್ಟಿ ಕೆರಾಡಿ, ಸತೀಶ್ಚಂದ್ರ ಶೆಟ್ಟಿ ಮುಳ್ಳಹಕ್ಲು, ಉಧ್ಯಮಿ ಗುಣಾಕರ ಶೆಟ್ಟಿ, ಶಾಲಾ ಸ್ಥಳ ದಾನಿಗಳಾದ ಉಜ್ವಲ ಪ್ರದೀಪ ಶೆಟ್ಟಿ ಹೆಮ್ಮಕ್ಕಿ, ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಶಿರಿಯಾರ ಶಶಿಧರ ಶೆಟ್ಟಿ, ಆಜ್ರಿ ಗ್ರಾಮ ಪಂಚಾಯತ್ ಸದಸ್ಯ ಪ್ರವೀಣ್ ಕುಮಾರ್ ಶೆಟ್ಟಿ ಕೊಡ್ಲಾಡಿ, ಆಜ್ರಿ ಗ್ರಾಮ ಪಂಚಾಯತ್ ಸದಸ್ಯೆ ಮಲ್ಲಿಕಾ ಶೆಟ್ಟಿ, ಚಂದ್ರ ಪೂಜಾರಿ, ಶಿರಿಯಾರ ಶಶಿಧರ ಶೆಟ್ಟಿ , ಸುಧಾಕರ ಶೆಟ್ಟಿ, ರಘುರಾಮ ಶೆಟ್ಟಿ ಹೊಳ್ಮಗೆ, ಪ್ರವೀಣ್ ಕುಮಾರ್ ಶೆಟ್ಟಿ ಆಲೂರು, ಸತೀಶ್ ಖಾರ್ವಿ, ಶಿವರಾಮ ಎ., ಶಾಲಾ ಮುಖ್ಯ ಶಿಕ್ಷಕಿ ಬೇಬಿ ಶೆಡ್ತಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಸಹಕಾರ ನೀಡಿದ ದಾನಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಬೈಂದೂರು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿ, ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ ಕುಮಾರ್ ಶೆಟ್ಟಿ ಸ್ವಾಗತ ಮಾಡಿ ದೈಹಿಕ ಶಿಕ್ಷಣ ಶಿಕ್ಷಕರುಗಳಾದ ಸಚಿನ್ ಶೆಟ್ಟಿ ಕಾರ್ಯಕ್ರಮ ನಿರೂಪಣೆ ಮಾಡಿದರು.

