Connect with us

Hi, what are you looking for?

Diksoochi News

ಅರೆ ಹೌದಾ!

ಸಿಮ್ ಖರೀದಿಸಬೇಕು ಅಂದ್ಕೊಂಡಿದ್ದೀರಾ?; ಇಂದಿನಿಂದ(ಡಿ.1) ಜಾರಿಯಾಗಿದೆ ಹೊಸ ನಿಯಮ

3

ನವದೆಹಲಿ: ಹೊಸ ಸಿಮ್‌ ಕಾರ್ಡ್‌ ಖರೀದಿ ಮಾಡಬೇಕು ಅಂತ ಅಂದ್ಕೊಂಡಿದ್ದೀರಾ? ಹಾಗಾದರೆ, ನೀವು ಡಿ.1 ರಿಂದ ಕೆಲ ಕಠಿಣ ನಿಯಮಗಳನ್ನು ಪಾಲಿಸಬೇಕಾಗುತ್ತೆ. ಗ್ರಾಹಕರು ಮಾತ್ರವಲ್ಲ ಸಿಮ್‌ ವಿತರಿಸುವ ಡೀಲರ್‌ಗಳು ಸಹ ಕಠಿಣ ನಿಯಮಗಳನ್ನು ಪಾಲಿಸಲೇಬೇಕು. ನಿಯಮ ಪಾಲಿಸದೇ ಉಲ್ಲಂಘನೆ ಮಾಡಿದರೆ 10 ಲಕ್ಷ ರೂ. ದಂಡ ವಿಧಿಸಲಾಗುತ್ತದೆ. ಗಂಭೀರ ಪ್ರಕರಣವಾದಲ್ಲಿ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ.

ಬಹುತೇಕ ಸೈಬರ್ ಅಪರಾಧಗಳು ಮತ್ತು ದೇಶವಿರೋಧಿ ಕೃತ್ಯಗಳನ್ನು ಸುಳ್ಳು ದಾಖಲೆಗಳೊಂದಿಗೆ ಜೋಡಿಸಲಾದ ಮೊಬೈಲ್ ಸಂಖ್ಯೆಗಳನ್ನು ಬಳಸುತ್ತಿರುವ ಹಿನ್ನೆಲೆಯಲ್ಲಿ ಇವುಗಳಿಗೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಈಗ ಕಠಿಣ ಕ್ರಮ ಕೈಗೊಂಡಿದೆ.

ಹೊಸ ನಿಯಮಗಳು :
ವ್ಯಾಪಾರಸ್ಥರು/ ಕಂಪನಿಗಳಿಗೆ ಮಾತ್ರ ಸಿಮ್ ಕಾರ್ಡ್‌ಗಳನ್ನು ದೊಡ್ಡ ಪ್ರಮಾಣದಲ್ಲಿ ಖರೀದಿಸಲು ಅನುಮತಿ ನೀಡಲಾಗಿದೆ. ಸಾಮಾನ್ಯ ಬಳಕೆದಾರರು ಒಂದು ಗುರುತಿನಿಂದ ಗರಿಷ್ಠ 9 ಸಿಮ್‌ಗಳನ್ನು ಮಾತ್ರ ಪಡೆಯಬಹುದು.
ಸಿಮ್‌ ಕಾರ್ಡ್‌ ರದ್ದು/ ನಿಷ್ಕ್ರಿಯಗೊಳಿಸಿದ 90 ದಿನಗಳ ನಂತರ ಆ ಸಂಖ್ಯೆಯನ್ನು ಬೇರೆ ಗ್ರಾಹಕರಿಗೆ ನೀಡಲಾಗುತ್ತದೆ.

Advertisement. Scroll to continue reading.

ಸಿಮ್ ಕಾರ್ಡ್‌ಗಳನ್ನು ಖರೀದಿಸುವ ಗ್ರಾಹಕರು ತಮ್ಮ ಆಧಾರ್ ಮತ್ತು ಜನಸಂಖ್ಯಾ ಡೇಟಾವನ್ನು ಸಲ್ಲಿಸಬೇಕಾಗುತ್ತದೆ.

ನೋಂದಾಯಿಸದ ಡೀಲರ್‌ಗಳ ಮೂಲಕ ಸಿಮ್ ಕಾರ್ಡ್‌ಗಳನ್ನು ಮಾರಾಟ ಮಾಡಿದರೆ ಹೊಸ ನಿಯಮಗಳ ಪ್ರಕಾರ ಟೆಲಿಕಾಂ ಆಪರೇಟರ್‌ಗಳಿಗೆ 10 ಲಕ್ಷ ರೂ. ದಂಡ ವಿಧಿಸಲಾಗುತ್ತದೆ.

ಎಲ್ಲಾ ಸಿಮ್‌ ಕಾರ್ಡ್‌ ಡೀಲರ್‌ಗಳು ಕಡ್ಡಾಯವಾಗಿ ನವೆಂಬರ್ ಅಂತ್ಯದೊಳಗೆ ದಾಖಲೆಗಳನ್ನು ಸಲ್ಲಿಸಬೇಕು ಮತ್ತು ನೋಂದಾಯಿಸಿಕೊಳ್ಳಬೇಕು. ಸಿಮ್‌ ಕಾರ್ಡ್‌ ಡೀಲರ್‌ಗಳು ಅಥವಾ ಚಿಲ್ಲರೆ ವ್ಯಾಪಾರಿಯು ನೋಂದಣಿಗಾಗಿ ಕಾರ್ಪೊರೇಟ್ ಗುರುತಿನ ಸಂಖ್ಯೆ (CIN), ಸೀಮಿತ ಹೊಣೆಗಾರಿಕೆ ಪಾಲುದಾರಿಕೆ ಗುರುತಿನ ಸಂಖ್ಯೆ (LLPIN) ಅಥವಾ ವ್ಯಾಪಾರ ಪರವಾನಗಿ, ಆಧಾರ್ ಅಥವಾ ಪಾಸ್‌ಪೋರ್ಟ್, ಪಾನ್‌, ಸರಕು ಮತ್ತು ಸೇವಾ ತೆರಿಗೆ ನೋಂದಣಿ ಪ್ರಮಾಣಪತ್ರ ಇತ್ಯಾದಿಗಳನ್ನು ಒದಗಿಸಬೇಕಾಗುತ್ತದೆ.
ಸಿಮ್‌ ಡೀಲರ್‌ಗಳು ನಕಲಿ ದಾಖಲೆಗಳನ್ನು ಸಲ್ಲಿಸಿದರೆ, ಟೆಲಿಕಾಂ ಆಪರೇಟರ್‌ಗಳು ಅವರ ಐಡಿಯನ್ನು ನಿರ್ಬಂಧಿಸಬೇಕು. ಅಷ್ಟೇ ಅಲ್ಲದೇ ಸಿಮ್‌ ಡೀಲರ್‌ನಿಂದ ಯಾರಿಗೆಲ್ಲ ಸಿಮ್‌ ಕಾರ್ಡ್‌ ವಿತರಣೆಯಾಗಿದೆಯೋ ಆ ಎಲ್ಲಾ ಗ್ರಾಹಕರು ಸಿಮ್‌ ಪಡೆಯಲು ನೀಡಿದ ದಾಖಲೆಗಳನ್ನು ಮರು ಪರಿಶೀಲಿಸಬೇಕಾಗುತ್ತದೆ.
ನವೆಂಬರ್ 30 ರೊಳಗೆ ನೋಂದಾಯಿಸದೇ ಉಳಿಯುವ ಸಿಮ್ ಕಾರ್ಡ್ ಮಾರಾಟಗಾರರು 10 ಲಕ್ಷ ರೂ.ವರೆಗೆ ದಂಡ ಪಾವತಿಸಬೇಕಾಗುತ್ತದೆ ಮತ್ತು ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!