Connect with us

Hi, what are you looking for?

Diksoochi News

ಕ್ರೀಡೆ

ಆಸ್ಟ್ರೇಲಿಯಾ ವಿರುದ್ಧ ಟಿ-20 ಸರಣಿ ವಶಕ್ಕೆ ಪಡೆದ ಭಾರತ

1

ರಾಯ್ಪುರದ ಶಹೀದ್ ವೀರ್ ನಾರಾಯಣ ಸಿಂಗ್ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯ 4ನೇ ಪಂದ್ಯದಲ್ಲಿ ಭಾರತ 3-1 ರಿಂದ ಗೆದ್ದು ಸರಣಿ ವಶಕ್ಕೆ ಪಡೆದಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 174 ರನ್ ಕಲೆ ಹಾಕಿತ್ತು.

ಯಶಸ್ವಿ ಜೈಸ್ವಾಲ್ ಮತ್ತು ರುತುರಾಜ್ ಗಾಯಕ್ವಾಡ್ ಉತ್ತಮ ಆರಂಭ ನೀಡಿದರು. ಜೈಸ್ವಾಲ್ 28 ಎಸೆತಗಳಲ್ಲಿ 37 ರನ್ ಗಳಿಸಿದರೆ, ಗಾಯಕ್ವಾಡ್ 28 ಎಸೆತಗಳಲ್ಲಿ 32 ರನ್ ಗಳಿಸಿದರು.

ಉಪನಾಯಕ ಶ್ರೇಯಸ್ ಅಯ್ಯರ್ 7 ಎಸೆತಗಳಲ್ಲಿ 8 ರನ್ ಗಳಿಸಿ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ನಾಯಕ ಸೂರ್ಯಕುಮಾರ ಯಾದವ್ ಕೇವಲ 1 ರನ್ ಗಳಿಸಿದರು. ರಿಂಕುಸಿಂಗ್ 29 ಎಸೆತಗಳಲ್ಲಿ 4 ಬೌಂಡರಿ ಎರಡು ಸಿಕ್ಸರ್ ಸಹಿತ 46 ರನ್ ಗಳಿಸಿದರೆ, ಜಿತೇಶ್ ಶರ್ಮಾ 19 ಎಸೆತಗಳಲ್ಲಿ 1 ಬೌಂಡರಿ 3 ಸಿಕ್ಸರ್ ಸಹಿತ 35 ರನ್ ಗಳಿಸಿ ಮಿಂಚಿದರು. ಅಕ್ಷರ್ ಪಟೇಲ್ ಮತ್ತು ದೀಪಕ್ ಚಹಾರ್ ಸೊನ್ನೆಗೆ ಔಟಾದರು.

Advertisement. Scroll to continue reading.

ಭಾರತ ನೀಡಿದ175 ರನ್ ಗಳ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಲಷ್ಟೇ ಶಕ್ಯವಾಯಿತು. ಅಕ್ಷರ್ ಪಟೇಲ್ 3, ಚಹರ್ 2, ಬಿಷ್ನೋಲ್, ಖಾನ್ ತಲಾ 1 ವಿಕೆಟ್ ಕಬಳಿಸಿದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!