ದುಬೈ : ಸಿಓಪಿ 28 ಶೃಂಗಸಭೆಗೆ ದುಬೈಗೆ ಭೇಟಿ ನೀಡಿದ್ದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದಾರೆ.
ಅಲ್ಲದೇ, ಅವರು ಈ ಫೋಟೋವನ್ನು ತಮ್ಮ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. “ಗುಡ್ ಫ್ರೆಂಡ್ಸ್ ಎಟ್ ಸಿಓಪಿ28 #ಮೆಲೋಡಿ” ಎಂಬ ಶೀರ್ಷಿಕೆ ನೀಡಿದ್ದಾರೆ. ಇದೀಗ ಈ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಮೆಲೋನಿ ಕಳೆದ ಸೆಪ್ಟೆಂಬರ್ ನಲ್ಲಿ ಭಾರತದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದರು. ಶೃಂಗಸಭೆ ವೇಳೆ ಮೋದಿಯವರ ಜೊತೆ ಇಟೆಲಿ ಪ್ರಧಾನಿ ನಿಯೋಗದಿಂದ ಮಾತುಕತೆ ನಡೆದಿತ್ತು.
ಮೋದಿಯವರು ಮೆಲೋನಿ ಅವರಲ್ಲದೆ, ಪ್ರಧಾನಿ ಮೋದಿ ಅವರು ಬ್ರಿಟಿಷ್ ಪ್ರಧಾನಿ ರಿಷಿ ಸುನಕ್, ಬ್ರೆಜಿಲ್ ಪ್ರಧಾನಿ ಲೂಯಿಜ್ ಇನಾಸಿಯೊ ಲುಲಾ ಡಾ ಸಿಲ್ವಾ, ಬ್ರಿಟಿಷ್ ವಿದೇಶಾಂಗ ಸಚಿವ ಡೇವಿಡ್ ಕ್ಯಾಮರೂನ್, ಬ್ರಿಟನ್ ಮಾಜಿ ಪ್ರಧಾನಿ ಟೋನಿ ಬ್ಲೇರ್ ಅವರನ್ನು ಭೇಟಿಯಾದರು.
ಇಲ್ಲಿ ವಿಶ್ವಸಂಸ್ಥೆಯ ಹವಾಮಾನ ಬದಲಾವಣೆ ಸಮ್ಮೇಳನದ ನಾಲ್ಕು ಅಧಿವೇಶನಗಳನ್ನು ಉದ್ದೇಶಿಸಿ ಪ್ರಧಾನಿ ಮೋದಿ ಮಾತನಾಡಿದರು. ಸಮಾವೇಶದಲ್ಲಿ, ಪ್ರಧಾನಿ ಮೋದಿ ಮತ್ತು ಇತರ ಜಾಗತಿಕ ನಾಯಕರು ಒಟ್ಟಿಗೆ ಗ್ರೂಪ್ ಫೆÇೀಟೋ ಕೂಡ ತೆಗೆದುಕೊಂಡರು.
ದುಬೈಗೆ ತೆರಳಿದ್ದ ಮೋದಿಯವರು ಸಿಓಪಿ 28 ಶೃಂಗಸಭೆಯಾಗಿ ಇಂದು ದೆಹಲಿಗೆ ಮರಳಿದ್ದಾರೆ. ದುಬೈ ಭೇಟಿ ಸಂದರ್ಭದಲ್ಲಿ ಮೋದಿಯವರು, ವಿವಿಧ ರಾಷ್ಟ್ರಗಳ ಮುಖ್ಯಸ್ಥರ ಜೊತೆ ಚರ್ಚೆ ನಡೆಸಿದ್ದಾರೆ.