Connect with us

Hi, what are you looking for?

Diksoochi News

ರಾಜ್ಯ

ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ವೀರ ಮರಣವನ್ನಪ್ಪಿದ ಅರ್ಜುನ

1

ಹಾಸನ : ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಬರೋಬ್ಬರಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವಿಗೀಡಾಗಿದೆ. ಅದಕ್ಕೆ 63 ವರ್ಷ ವಯಸ್ಸಾಗಿತ್ತು.

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಯಸಳೂರು ಬಳಿ ಕಾಡಾನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆಯುತ್ತಿತ್ತು. ಈ ವೇಳೆ ಕಾಡಾನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ಕಾರ್ಯಾಚರಣೆ ವೇಳೆ ಅರ್ಜುನನ ಮೇಲೆ ಒಂಟಿಸಲಗ ಅಟ್ಯಾಕ್ ಮಾಡಿದೆ. ಈ ಘಟನೆಯಲ್ಲಿ ಅರ್ಜುನ ಆನೆ ಮೃತಪಟ್ಟಿದೆ ಎಂದು ವರದಿಯಾಗಿದೆ.

ಕಾರ್ಯಾಚರಣೆ ವೇಳೆ ಒಂಟಿಸಲಗ ದಾಳಿ ಮಾಡುತ್ತಿದ್ದಂತೆ ಉಳಿದ ಮೂರು ಸಾಕಾನೆಗಳು ಓಡಿ ಹೋಗಿವೆ. ಕೊನೆಗೆ ಒಂಟಿಸಲಗದ ಜೊತೆ ಅರ್ಜುನ ಆನೆಯು ಒಂಟಿಯಾಗಿ ಹೋರಾಟ ನಡೆಸಿದೆ. ಈ ಕಾಳಗ ಆರಂಭವಾಗುತ್ತಿದ್ದಂತೆ ಅರ್ಜುನನ ಮೇಲಿನಿಂದ ಮಾವುತ ಇಳಿದು ಓಡಿದ್ದಾರೆ. ಅರ್ಜುನ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

Advertisement. Scroll to continue reading.

ಅರ್ಜುನ ಆನೆಯು 1960 ರಲ್ಲಿ ಜನಿಸಿತ್ತು. 1968 ರಲ್ಲಿ ಕರ್ನಾಟಕದ ಪಶ್ಚಿಮ ಘಟ್ಟಗಳ ಕಾಕನಕೋಟೆಯ ಕಾಡುಗಳಿಂದ ಖೆಡ್ಡಾ ಕಾರ್ಯಾಚರಣೆ ನಡೆಸಿ ಅರ್ಜುನನನ್ನು ಸೆರೆಹಿಡಿಯಲಾಗಿತ್ತು. ಆ ಆನೆ ಪಳಗಿದ ನಂತರ 1990ರ ದಶಕದಲ್ಲಿ ಮೈಸೂರಿನಲ್ಲಿ ದಸರಾ ಉತ್ಸವದ ಸಮಯದಲ್ಲಿ ಮೆರವಣಿಗೆಗಳನ್ನು ಒಳಗೊಂಡ ಶಿಬಿರಗಳಲ್ಲಿ ಭಾಗವಹಿಸಲು ಅವಕಾಶ ನೀಡಲಾಯಿತು. ದ್ರೋಣ, ಬಲರಾಮ ಆನೆಗಳು ಅನಾರೋಗ್ಯಕ್ಕೆ ಒಳಗಾದ ನಂತರ ಅರ್ಜುನನನ್ನು ಅಂಬಾರಿ ಹೊರಲು ಅವಕಾಶ ನೀಡಲಾಗಿತ್ತು.
ಅರ್ಜುನ ಈಗಾಗಲೇ ತನ್ನ ಕೆಟ್ಟ ಕೋಪಕ್ಕೆ ಹೆಸರುವಾಸಿಯಾಗಿದ್ದಾನೆ. ಅರ್ಜುನನು 2012 ರಿಂದ 2019 ರವರೆಗೆ (8 ವರ್ಷಗಳು) ಅಂಬಾರಿ ಹೊತ್ತಿದ್ದನು . ಈಗ 60 ವರ್ಷ ಮೇಲ್ಪಟ್ಟ ಆನೆಗಳನ್ನು ನಿವೃತ್ತಿಗೊಳಿಸುವ ಸರ್ಕಾರದ ಆದೇಶದ ಮೇಲೆ ಹೆಸರನ್ನು ಕೈಬಿಡಲಾಗಿತ್ತು. ಬಳಿಕ ಅಭಿಮನ್ಯು ಅರ್ಜುನನ ಉತ್ತರಾಧಿಕಾರಿಯಾಗಿ ಅಂಬಾರಿ ಹೊರುತ್ತಿದ್ದಾನೆ.

ಇದೇ ವರ್ಷ 14 ಬಾರಿ ಚಿನ್ನದ ಅಂಬಾರಿಯಲ್ಲಿ ಹೊತ್ತಿದ್ದ ಬಲರಾಮ (67) ಆನೆಯು ಮೇ ತಿಂಗಳಲ್ಲಿ ಮೃತಪಟ್ಟಿತ್ತು.

ಹೆಚ್ಚು ತೂಕದ ಆನೆ :

ಎಲ್ಲಾ ಆನೆಗಳಿಗಿಂತ ಹೆಚ್ಚು ತೂಕ
ಅರ್ಜುನ ಎಲ್ಲಾ ಆನೆಗಳಿಗಿಂತ ಹೆಚ್ಚು ಅಂದರೆ 5725 ಕೆ.ಜಿ. ತೂಕ ಹೊಂದಿದ್ದಾನೆ. ಆಸಕ್ತಿಯ ವಿಷಯ ಎಂದರೆ ಆನೆ ಅರ್ಜುನ 2010ರಲ್ಲಿ 4541 ಕೆಜಿ ತೂಕವಿದ್ದರೆ, 2011ರಲ್ಲಿ 5055 ಕೆಜಿ ತೂಕವಿದ್ದನು 2012ರಲ್ಲಿ 5520 ಕೆಜಿ ತೂಕಹೆಚ್ಚಿಸಿಕೊಂಡು ಅಂಬಾರಿ ಹೊತ್ತು ತಾನು ಶಕ್ತಿ ಶಾಲಿ ಎಂಬುದನ್ನು ನಿರೂಪಿಸಿದ್ದನು. ಜತೆಗೆ ಅಲ್ಲಿಂದ 2019ರವರೆಗೆ ಸುಸೂತ್ರವಾಗಿ ಅಂಬಾರಿ ಹೊತ್ತು ಗಮನಸೆಳೆದಿದ್ದನು.

Advertisement. Scroll to continue reading.

ಪ್ರಶಸ್ತಿ ಪಡೆದಿದ್ದ ಆನೆ :

2019ರಲ್ಲಿ ನಾಲ್ಕು ಜನರನ್ನು ತಿಂದಿದ್ದ ಹುಲಿಯನ್ನು ಸೆರೆ ಹಿಡಿಯಲು ಅರ್ಜುನನ್ನು ಬಳಸಿಕೊಂಡು ಮೂರು ದಿನ ಕಾರ್ಯಾಚರಣೆ ನಡೆಸಿ ಹುಲಿಯ ಹೆಜ್ಜೆಗುರುತು ಆದರಿಸಿ ಹುಲಿಯನ್ನು ಹಿಡಿಯಲಾಗಿತ್ತು. ಇದಕ್ಕೆ ಮೆಚ್ಚಿ ಸರಕಾರ ಅರ್ಜುನ ಮತ್ತು ಮಾವುತ ವಿನುಗೆ ಪ್ರಶಸ್ತಿ ಪತ್ರ ನೀಡಿತ್ತು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಜ್ಯೋತಿಷ್ಯ

0 ದಿನಾಂಕ : ೨೨-೦೨-೨೪, ವಾರ: ಗುರುವಾರ, ನಕ್ಷತ್ರ : ಪುಷ್ಯ, ತಿಥಿ : ತ್ರಯೋದಶಿ ವಿವಾಹೇತರ ಸಂಬಂಧಗಳಿಂದ ಅಂತರ ಕಾಯ್ದುಕೊಳ್ಳಬೇಕು. ನೀವು ಸಂಬಂಧಿಕರನ್ನು ಹೆಚ್ಚು ನಂಬಬಾರದು. ನಿಮ್ಮ ಆರೋಗ್ಯದ ಬಗ್ಗೆ ಸ್ವಲ್ಪ...

ರಾಜ್ಯ

0 ಬೆಂಗಳೂರು: ನಟ ಡಾಲಿ ಧನಂಜಯ್ ಕಾಂಗ್ರೆಸ್ ಪಕ್ಷ ಮೂಲಕ ರಾಜಕೀಯ ಪ್ರವೇಶಿಸುತ್ತಾರೆ, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಪ್ರತಾಪ್ ಸಿಂಹ ವಿರುದ್ಧ ಸ್ಪರ್ಧಿಸುತ್ತಾರೆ ಎಂಬ ಸುದ್ದಿಗೆ ನಟ ಬ್ರೇಕ್ ಹಾಕಿದ್ದಾರೆ. ಈ...

ಕ್ರೀಡೆ

1 ಭಾರತ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಪತ್ನಿ, ನಟಿ ಅನುಷ್ಕಾ ಶರ್ಮಾ 2ನೇ ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ಅಕಾಯ್ ಎಂದು ನಾಮಕರಣ ಮಾಡಲಾಗಿದೆ. ಈ ಬಗ್ಗೆ ಸ್ವತಃ...

ರಾಷ್ಟ್ರೀಯ

0 ನವದೆಹಲಿ:  ಆಮ್ ಆದ್ಮಿ ಪಕ್ಷದ(ಎಎಪಿ) ಅಭ್ಯರ್ಥಿ ಕುಲದೀಪ್ ಕುಮಾರ್ ಅವರು ಚಂಡೀಗಢದ ಚುನಾಯಿತ ಮೇಯರ್ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಘೋಷಿಸಿದೆ. ಇದಕ್ಕೂ ಮುನ್ನ 8 ‘ಅಸಿಂಧು’ ಮತಗಳನ್ನು ಸೇರಿಸಿ ಮತಗಳ...

ರಾಷ್ಟ್ರೀಯ

0 ಮುಂಬೈ: ಪ್ರಸಾದ ಸೇವಿಸಿ ಅಸ್ವಸ್ಥಗೊಂಡ 300 ಮಂದಿಯನ್ನು ರಸ್ತೆಯಲ್ಲೇ ಸಾಲಾಗಿ ಮಲಗಿಸಿ ಡ್ರಿಪ್ಸ್‌ ಹಾಕಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಬುಲ್ಧಾನ ಜಿಲ್ಲೆಯ ಲೋನಾರ್‌ನ ಸೋಮಥಾನ ಗ್ರಾಮದಲ್ಲಿ ಒಂದು ವಾರದಿಂದ ʼಹರಿಣಂ ಸಪ್ತಾಹʼ...

error: Content is protected !!