ಚಂದನವನ : ಕನ್ನಡದ ಹಿರಿಯ ನಟ ಲೋಹಿತಾಶ್ವ ಅವರು ವಿಧಿವಶರಾಗಿದ್ದಾರೆ, ಇಂದು ಮಧ್ಯಾಹ್ನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.
ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಅಕ್ಟೋಬರ್ 4ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ವಿಧಿವಶರಾಗಿದ್ದಾರೆ. ಮೂಲತಃ ತುಮಕೂರಿನ ತೊಂಡಗೆರೆ ಗ್ರಾಮದವರಾದ ಲೋಹಿತಾಶ್ವ ಅವರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದಾರೆ.
Advertisement. Scroll to continue reading.

ಅಭಿಮನ್ಯು, AK 47, ಅವತಾರ ಪುರುಷ, ಚಿನ್ನ, ಹೊಸ ನೀರು, ಗಜೇಂದ್ರ, ವಿಶ್ವ, ಪ್ರತಾಪ್, ಪೊಲೀಸ್ ಲಾಕಪ್, ರೆಡಿಮೇಡ್ ಗಂಡ, ಸ್ನೇಹಲೋಕ, ಸುಂದರಕಾಂಡ, ಸಿಂಹದ ಮರಿ, ಮೂರು ಜನ್ಮ, ಸಾಂಗ್ಲಿಯಾನ, ಟೈಮ್ ಬಾಂಬ್, ಲಾಕಪ್ ಡೆತ್, ಸಂಭವಾಮಿ ಯುಗೇ ಯುಗೇ, ರಣಚಂಡಿ, ಸಮಯದ ಗೊಂಬೆ, ಸಂಗ್ರಾಮ, ನ್ಯೂ ಡೆಲ್ಲಿ, ಸಾರಥಿ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ಅವರು ನಟಿಸಿ, ಜನಮನ್ನಣೆ ಪಡೆದಿದ್ದಾರೆ.
In this article:Diksoochi news, diksoochi Tv, diksoochi udupi, Kannada actor, lohithashwa, ಕನ್ನಡ ನಟ, ಲೋಹಿತಾಶ್ವ

Click to comment