ಮಾಲ್ಡೀವ್ಸ್ : ರಾಜಧಾನಿ ಮಾಲೆಯ ಇಕ್ಕಟ್ಟಾದ ವಸತಿಗೃಹದಲ್ಲಿ ಭಾರೀ ಅಗ್ನಿ ದುರಂತ ನಡೆದಿದೆ. ಅಗ್ನಿ ದುರಂತದಲ್ಲಿ 10 ಜನ ಸಾವನ್ನಪಿದ್ದಾರೆ ಎಂದು ಹೇಳಲಾಗಿದೆ. ಇದರಲ್ಲಿ 9 ಜನ ಭಾರತೀಯರು ಎಂದು ವರದಿಯಲ್ಲಿ ಹೇಳಲಾಗಿದೆ. ಅನೇಕರಿಗೆ ಗಾಯಲಾಗಿದೆ.
ಅಗ್ನಿಶಾಮಕ ದಳ ಈಗಾಗಲೇ ಸ್ಥಳಕ್ಕೆ ಬಂದಿದ್ದು ಬೆಂಕಿ ನಂದಿಸುವ ಕಾರ್ಯವನ್ನು ಮಾಡುತ್ತಿದೆ. ಇಕ್ಕಟ್ಟಾದ ವಸತಿಗೃಹಗಳಲ್ಲಿ ಬೆಂಕಿ ಆವರಿಸಿದ್ದರಿಂದ ಕನಿಷ್ಠ 10 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬೆಂಕಿಯಲ್ಲಿ ಧ್ವಂಸಗೊಂಡ ಕಟ್ಟಡದ ಮೇಲಿನ ಮಹಡಿಯಿಂದ ಅಧಿಕಾರಿಗಳು 10 ಮೃತದೇಹಗಳನ್ನು ಹೊರತೆಗೆದಿದ್ದಾರೆ.

ನೆಲ ಅಂತಸ್ತಿನ ವಾಹನ ರಿಪೇರಿ ಗ್ಯಾರೇಜ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎನ್ನಲಾಗಿದೆ ಬೆಂಕಿಯನ್ನು ನಂದಿಸಲು ಸುಮಾರು ನಾಲ್ಕು ಗಂಟೆಗಳನ್ನು ತೆಗೆದುಕೊಂಡಿತು. ಬೆಂಕಿಯಲ್ಲಿ ಸಾವನ್ನಪ್ಪಿದ ಇನ್ನೊಬ್ಬ ವ್ಯಕ್ತಿ ಬಾಂಗ್ಲಾದೇಶದ ಪ್ರಜೆ ಎಂದು ಭದ್ರತಾ ಅಧಿಕಾರಿಯನ್ನು ಉಲ್ಲೇಖಿಸಿ ಸುದ್ದಿಸಂಸ್ಥೆ ಎಎಫ್‌ಪಿ ವರದಿ ಮಾಡಿದೆ.
ಮಾಲೆಯ 2.50 ಲಕ್ಷ ಜನಸಂಖ್ಯೆಯಲ್ಲಿ ಹೆಚ್ಚಿನವರು ವಿದೇಶಿ ಕೆಲಸಗಾರರೇ ಇದ್ದಾರೆ. ಹೆಚ್ಚಾಗಿ ಬಾಂಗ್ಲಾದೇಶ, ಭಾರತ, ನೇಪಾಳ, ಪಾಕಿಸ್ತಾನ ಮತ್ತು ಶ್ರೀಲಂಕಾದಿಂದ ಬಂದವರು ಎಂದು ಹೇಳಲಾಗುತ್ತಿದೆ.

