Connect with us

Hi, what are you looking for?

Diksoochi News

ರಾಷ್ಟ್ರೀಯ

ಪಿಒಕೆ ನಮ್ಮದೇ…ಅಮಿತ್ ಶಾ ಘೋಷಣೆ; ಲೋಕಸಭೆಯಲ್ಲಿ ಜಮ್ಮು ಮತ್ತು ಕಾಶ್ಮೀರ ಮಸೂದೆ ಅಂಗೀಕಾರ

1

ನವದೆಹಲಿ : ಜಮ್ಮು ಮತ್ತು ಕಾಶ್ಮೀರ ಮೀಸಲಾತಿ ತಿದ್ದುಪಡಿ ಮಸೂದೆ -೨೦೨೩ ಹಾಗೂ ಜಮ್ಮು ಮತ್ತು ಕಾಶ್ಮೀರ ಮರುಸಂಘಟನೆ ತಿದ್ದುಪಡಿ ಮಸೂದೆ ೨೦೨೩ ಅನ್ನು ಬುಧವಾರ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ. ಲೋಕಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬAಧಿಸಿದ ಈ ಎರಡು ಮಸೂದೆಗಳನ್ನು ಮಂಡಿಸಿದರು.

ಮಸೂದೆ ಮಂಡಿಸಿ ಮಾತನಾಡಿದ ಅಮಿತ್ ಶಾ, ಮೋದಿ ಸರ್ಕಾರದ ಗುರಿ ಪಿಒಕೆ ಅಂತ ಘೋಷಿಸಿದರು. ಯಾರಿಗೂ ಕಾಶ್ಮೀರಿಗಳ ಬಗ್ಗೆ ಕಾಳಜಿ ಇರಲಿಲ್ಲ. ಆದರೆ ಈಗ ಅವರಿಗೆ ನ್ಯಾಯ ಕೊಡಿಸುವ ಸಮಯ ಬಂದಿದೆ. ಈ ಕೆಲಸವನ್ನು ನರೇಂದ್ರ ಮೋದಿ ಸರ್ಕಾರ ಮಾಡುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಮೋದಿ ಸರ್ಕಾರ ಕೇವಲ ಉಗ್ರರನ್ನು ನಿರ್ಮೂಲನೆ ಮಾಡಿಲ್ಲ. ಉಗ್ರರಿಗೆ ಹಣ ನೀಡುತ್ತಿದ್ದ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಲು ಕ್ರಮ ತೆಗೆದುಕೊಂಡಿದೆ ಎಂದು ತಿಳಿಸಿದರು.

Advertisement. Scroll to continue reading.

ಕಾಶ್ಮೀರದ ಈ ಎರಡು ಮಸೂದೆಗಳಲ್ಲಿ ಒಂದು ಮಸೂದೆ ಮಹಿಳೆ ಸೇರಿದಂತೆ ಇಬ್ಬರು ಕಾಶ್ಮೀರಿ ವಲಸಿಗ ಸಮುದಾಯದ ಸದಸ್ಯರನ್ನು ವಿಧಾನಸಭೆಗೆ ನಾಮನಿರ್ದೇಶನ ಮಾಡಲು ಅವಕಾಶ ಕಲ್ಪಿಸುತ್ತದೆ ಎಂದು ಕೇಂದ್ರ ಗೃಹ ಸಚಿವರು ಲೋಕಸಭೆಗೆ ತಿಳಿಸಿದರು.

ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬAಧಿಸಿದ ಈ ಎರಡು ಮಸೂದೆಗಳು ಕಳೆದ ೭೦ ವರ್ಷಗಳಿಂದ ತಮ್ಮ ಹಕ್ಕುಗಳಿಂದ ವಂಚಿತರಾದವರಿಗೆ ನ್ಯಾಯವನ್ನು ನೀಡಲಿವೆ ಎಂದು ಅಮಿತ್ ಶಾ ಹೇಳಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ರಾಜ್ಯ

1 ಬೆಂಗಳೂರು:  ಪ್ರಧಾನಿ ಮೋದಿ ಬಗ್ಗೆ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಖಾತೆ ಸಚಿವ ಶಿವರಾಜ ತಂಗಡಗಿ ವಿರುದ್ಧ ಕೊಪ್ಪಳ ಜಿಲ್ಲೆಯ ಕಾರಟಗಿ ಪೊಲೀಸ್‌ ಠಾಣೆಯಲ್ಲಿ ಮಂಗಳವಾರ ದೂರು...

ರಾಷ್ಟ್ರೀಯ

1 ಬೆಂಗಳೂರು: ಎನ್‌ಡಿಎ ಮೈತ್ರಿಕೂಟದಡಿ ‘ಅಬ್‌ ಕಿ ಬಾರ್‌ 400 ಪಾರ್‌’ ಘೋಷಣೆ ಮೊಳಗಿಸಿರುವ ಬಿಜೆಪಿ ಲೋಕಸಭಾ ಚುನಾವಣೆಯಲ್ಲಿ 370 ಸ್ಥಾನ ಗೆಲ್ಲುವ ಮಹತ್ವಾಕಾಂಕ್ಷೆ ಹೊಂದಿದೆ. ಈ ಗುರಿ ತಲುಪಲು ಟಿಕೆಟ್‌ ಹಂಚಿಕೆ...

ಅರೆ ಹೌದಾ!

0 ಬೆಂಗಳೂರು: ಫ್ರೀ ಟಿಕೆಟ್‌ ಎಂದು ಪಕ್ಷಿಗಳನ್ನು ಜೊತೆಗಿಟ್ಟುಕೊಂಡು ಬಸ್‌ ಹತ್ತಿದ್ದ ಅಜ್ಜಿ – ಮೊಮ್ಮಗಳಿಗೆ ಕಂಡಕ್ಟರ್‌ ನೀಡಿದ ಟಿಕೆಟ್‌ ದೊಡ್ಡ ಶಾಕ್‌ ನೀಡಿದೆ. ಪಕ್ಷಿಗಳಿಗೆ ಟಿಕೆಟ್ ನೀಡಬೇಕೆನ್ನುವುದು ನಿಯಮವಾದರೂ ನೀಡಿದ ಟಿಕೆಟ್...

ರಾಷ್ಟ್ರೀಯ

1 ಬೆಂಗಳೂರು: ದೆಹಲಿ ಮದ್ಯ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಖಲಿಸ್ತಾನಿ ಗುಂಪುಗಳಿಂದ 16 ಮಿಲಿಯನ್‌ ಡಾಲರ್‌ (ಅಂದಾಜು 133.54 ಕೋಟಿ ರು.) ಪಡೆದಿರುವ ಗಂಭೀರ ಆರೋಪ ಕೇಳಿ ಬಂದಿದೆ. ಭಾರತಕ್ಕೆ...

ರಾಷ್ಟ್ರೀಯ

0 ಮುಂಬೈ: ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಹೊರಬರುತ್ತಿದ್ದ ವಿದ್ಯಾರ್ಥಿಯನ್ನು ಅಪಹರಿಸಿ ಹತ್ಯೆ ಮಾಡಿರುವ ಘಟನೆ ಮಹಾರಾಷ್ಟ್ರದ  ಥಾಣೆಯಲ್ಲಿ ನಡೆದಿದೆ. ಪ್ರಕರಣದ ಪ್ರಮುಖ ಆರೋಪಿ ಸಲ್ಮಾನ್‌ ಮೌಲ್ವಿ ಎಂದು ತಿಳಿದುಬಂದಿದೆ. ಈತ ಹೊಸ ಮನೆ ಕಟ್ಟಲು...

error: Content is protected !!