ಅಸ್ಸಾಂನ ಗುವಾಹಟಿಯಲ್ಲಿ ಇಂದು ಬೆಳಗ್ಗೆ ರಿಕ್ಟರ್ ಮಾಪಕದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ(NCS) ತಿಳಿಸಿದೆ.
ಗುರುವಾರ ಬೆಳಿಗ್ಗೆ 5.42 ಕ್ಕೆ ಅಸ್ಸಾಂನ ಗುವಾಹಟಿಯಲ್ಲಿ ಭೂಮೇಲ್ಮೈಯಿಂದ 5 ಕಿಮೀ ಆಳದಲ್ಲಿ 3.5 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು NCS ಮಾಹಿತಿ ನೀಡಿದೆ.
ಎನ್‌ಸಿಎಸ್ ಹಂಚಿಕೊಂಡ ಅಂಕಿಅಂಶಗಳ ಪ್ರಕಾರ, ಗುರುವಾರ ಬೆಳಿಗ್ಗೆ 5.42 ಕ್ಕೆ ಈ ಪ್ರದೇಶದಲ್ಲಿ ಕಂಪನದ ಅನುಭವವಾಗಿದೆ.
Advertisement. Scroll to continue reading.
ಭೂಕಂಪದಿಂದಾದ ಹಾನಿಯ ಬಗ್ಗೆ ಇನ್ನೂ ಯಾವುದೇ ವರದಿಯಾಗಿಲ್ಲ.