ಬೆಂಗಳೂರು : ತಮ್ಮ ಮೊಬೈಲ್ ಪಾಸ್ ವರ್ಡ್ ಚೇಂಜ್ ಮಾಡಿದಕ್ಕೆ ಅಕ್ಕ ನೇಣಿಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಗಾಣಿಗರಪೇಟೆಯಲ್ಲಿ ನಡೆದಿದೆ.
ರುಚಿತಾ(19) ಆತ್ಮಹತ್ಯೆ ಮಾಡಿಕೊಂಡ ಯುವತಿ ಎಂದು ತಿಳಿದು ಬಂದಿದೆ. ರುಚಿತ ಮೊಬೈಲ್ ಫೋನ್ಗೆ ಅಡಿಕ್ಟ್ ಆಗಿದ್ದಳು. ಅಕ್ಕನಿಗೆ ಬುದ್ಧಿ ಕಲಿಸಲು ಆಕೆಯ ತಮ್ಮ ಮೊಬೈಲ್ ಪಾಸ್ ವರ್ಡ್ ಬದಲಾವಣೆ ಮಾಡಿದ್ದ ಎನ್ನಲಾಗಿದೆ.
ಈ ವೇಳೆ ರಂಜಿತಾ ತಮ್ಮನನ್ನು ಪಾಸ್ವರ್ಡ್ ಹೇಳುವಂತೆ ಕೇಳಿದ್ದಳು. ಆದರೆ ಆತ ಹೇಳಲಿಲ್ಲ ಎನ್ನಲಾಗಿದೆ. ಇದರಿಂದ ಮನನೊಂದ ರುಚಿತ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಆತ್ಮಹತ್ಯೆಗೆ ಯತ್ನಿಸಿದ್ದ ರುಚಿತಳಾನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿದೆ. ಆದರೆ, ಅಷ್ಟರಲ್ಲಾಗಲೇ ಆಕೆ ಮೃತಪಟ್ಟಿದ್ದಳು ಎನ್ನಲಾಗಿದೆ.
ಆತ್ಮಹತ್ಯೆ ತಡೆ ಸಹಾಯವಾಣಿ
COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ SAHAIHELPLINE@GMAIL.COM
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.

