ಉಳ್ಳಾಲ: ಸೋಮೇಶ್ವರ ಕಡಲತೀರದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಮುದ್ರ ಪಾಲಾದ ಘಟನೆ ಶನಿವಾರ ನಡೆದಿದೆ.
ಮಂಜೇಶ್ವರದ ಕುಂಜತ್ತೂರು ಅಡ್ಕ ನಿವಾಸಿ ಯಶ್ವಿತ್ ಮತ್ತು ಕುಂಜತ್ತೂರು ಮಜಲ್ ನಿವಾಸಿ ಯುವರಾಜ್ ಸಮುದ್ರಪಾಲಾದ ವಿದ್ಯಾರ್ಥಿಗಳು. ಸೋಮೇಶ್ವರ ಪರಿಜ್ಞಾನ ದ್ವಿತೀಯ ಪಿಯುಸಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಸಮುದ್ರ ತೀರದಲ್ಲಿ ಆಟವಾಡುವ ಸಂದರ್ಭ ಅಪ್ಪಳಿಸಿದ ಅಲೆಗಳ ನಡುವೆ ಇಬ್ಬರು ವಿದ್ಯಾರ್ಥಿಗಳು ಸಿಲುಕಿದ್ದಾರೆ ಎಂದು ತಿಳಿದುಬಂದಿದೆ.
Advertisement. Scroll to continue reading.
ಸ್ಥಳೀಯ ಈಜುಗಾರರು, ಉಳ್ಳಾಲ ಪೊಲೀಸ್ ಠಾಣಾ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆಯುತ್ತಿದೆ.