Connect with us

Hi, what are you looking for?

Diksoochi News

ರಾಜ್ಯ

ಮಡಿಕೇರಿ ಹೋಮ್ ಸ್ಟೇನಲ್ಲಿ ಕೇರಳ ಮೂಲದ ದಂಪತಿ, ಮಗು ಮೃತದೇಹ ಪತ್ತೆ

0

ಮಡಿಕೇರಿ : ಮಡಿಕೇರಿ ತಾಲ್ಲೂಕಿನ ಕಗ್ಗೋಡ್ಲು ಗ್ರಾಮದ ರೆಸಾರ್ಟ್‌ವೊಂದರಲ್ಲಿ ಮಗು ಸೇರಿ ಮೂವರ ಮೃತದೇಹ ಪತ್ತೆಯಾಗಿದೆ.

ರೆಸಾರ್ಟ್‌ನ ಕೋಣೆಯಲ್ಲಿ ಪತಿ, ಪತ್ನಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿದ್ದು, ಮಗುವಿನ ಮೃತದೇಹ ಹಾಸಿಗೆಯಲ್ಲಿ ಪತ್ತೆಯಾಗಿದೆ.

ಕೇರಳ ರಾಜ್ಯದ ಕೊಟ್ಟಾಯಂ ಬಳಿಯ ಪಡಿಚಾಟು ಗ್ರಾಮದ ವಿನೋದ್ (37), ಅವರ ಪತ್ನಿ ಹಾಗೂ ಮಗು ಮೃತಪಟ್ಟವರು. ಮಗುವನ್ನು ಕೊಂದು ದಂಪತಿ ನೇಣಿಗೆ ಶರಣಾಗಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

Advertisement. Scroll to continue reading.

ಶುಕ್ರವಾರ ಸಂಜೆ ಪ್ರವಾಸಕ್ಕೆಂದು ಕೊಡಗಿಗೆ ಬಂದವರು ರೆಸಾರ್ಟ್‌ನಲ್ಲಿ ತಂಗಿದ್ದರು ಎಂದು ಹೇಳಲಾಗಿದೆ. ಇಂದು ಬೆಳಗ್ಗೆ ಎಷ್ಟು ಹೊತ್ಯಾದರೂ ಬಾಗಿಲು ತೆಗೆಯದ ಹಿನ್ನಲೆ ಕಿಟಕಿ ಮೂಲಕ ನೋಡಿದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಕೇರಳದಿಂದ ಕುಟುಂಬದ ಸದಸ್ಯರು ಬಂದ ಬಳಿಕವಷ್ಟೇ ಹೆಚ್ಚಿನ ಮಾಹಿತಿ ತಿಳಿಯಲಿದೆ. ಸ್ಥಳಕ್ಕೆ ಮಡಿಕೇರಿ ಗಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!