ಭೋಪಾಲ್: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್ ಅವರನ್ನು ಆಯ್ಕೆ ಮಾಡಲಾಗಿದೆ. ಉಜ್ಜೈನಿ ದಕ್ಷಿಣ ಕ್ಷೇತ್ರದ ಶಾಸಕರಾಗಿರುವ ಮೋಹನ್ ಯಾದವ್ ನೂತನ ಸಿಎಂ ಆಗಿ ಆಯ್ಕೆಯಾಗಿದ್ದಾರೆ.
58 ರ ಹರೆಯದ ಡಾ. ಮೋಹನ್ ಯಾದವ್ ಅವರು ಉಜ್ಜಯಿನಿ ದಕ್ಷಿಣ ಕ್ಷೇತ್ರದಿಂದ ವಿಧಾನಸಭೆಯ ಸದಸ್ಯರಾಗಿದ್ದಾರೆ. 2013 ರಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. 2020 ರಿಂದ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದ ಸರಕಾರದಲ್ಲಿ ಉನ್ನತ ಶಿಕ್ಷಣ ಖಾತೆಯನ್ನು ಮೋಹನ್ ಯಾದವ್ ನಿಭಾಯಿಸಿದ್ದರು.
ನೂತನವಾಗಿ ಆಯ್ಕೆಯಾದ ಬಿಜೆಪಿ ಶಾಸಕರು ಸೋಮವಾರ ಸಭೆ ನಡೆಸಿ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಿದರು.
ಜಗದೀಶ್ ದೇವಡಾ, ರಾಕೇಶ್ ಶುಕ್ಲಾ ಡಿಸಿಎಂಗಳಾಗಿದ್ದಾರೆ. ಇನ್ನು ಕೇಂದ್ರ ಸಚಿವ ಸ್ಥಾನ ತೊರೆದು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ನರೇಂದ್ರ ಸಿಂಗ್ ತೋಮರ್‌ಗೆ ಸ್ಪೀಕರ್ ಪಟ್ಟ ಸಿಕ್ಕಿದೆ.
ನವೆಂಬರ್ 17 ರಂದು ನಡೆದ ಚುನಾವಣೆಯಲ್ಲಿ 230 ಸದಸ್ಯ ಬಲದ ವಿಧಾನಸಭೆಯಲ್ಲಿ ಬಿಜೆಪಿ 163 ಸ್ಥಾನಗಳನ್ನು ಗೆಲ್ಲುವ ಮೂಲಕ ಮಧ್ಯಪ್ರದೇಶದಲ್ಲಿ ಅಧಿಕಾರವನ್ನು ಉಳಿಸಿಕೊಂಡಿತ್ತು.