Connect with us

Hi, what are you looking for?

ರಾಜ್ಯ

ದತ್ತಪೀಠಕ್ಕೆ ಆಡಳಿತ ಮಂಡಳಿ ನೇಮಿಸಿ ಸರ್ಕಾರದ ಆದೇಶ

1

ಚಿಕ್ಕಮಗಳೂರು : ಚಿಕ್ಕಮಗಳೂರಿನ ವಿವಾದಿತ ಧಾರ್ಮಿಕ ಕ್ಷೇತ್ರ ದತ್ತಾತ್ರೇಯ ಪೀಠಕ್ಕೆ ರಾಜ್ಯ ಸರ್ಕಾರ ಆಡಳಿತ ಮಂಡಳಿಯನ್ನು ನೇಮಕ ಮಾಡಿದೆ.

ನಾಂ ದತ್ತಾತ್ರೇಯ ಪೀಠವು ಹಿಂದೂಗಳದ್ದು ಹಾಗೂ ನಾಗೇನ ಹಳ್ಳಿಯಲ್ಲಿರುವ ದರ್ಗಾ ಮುಸಲ್ಮಾನರಿಗೆ ಸೇರಿದ್ದು ಎಂಬುದಾಗಿ ಸಂಘ ಪರಿವಾರವು ಈ ಹಿಂದಿನಿಂದಲೂ ವಾದಿಸಿತ್ತು.

ಇಂದು ಈ ಕುರಿತು ಸಚಿವ ಸಂಪುಟದಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ದತ್ತಪೀಠಕ್ಕೆ ವ್ಯವಸ್ಥಾಪನಾ ಸಮಿತಿ ನೇಮಕ ಮಾಡಿ, ದತ್ತಾತ್ರೇಯ ಪೀಠಕ್ಕೆ ಆಡಳಿತ ಮಂಡಳಿಯನ್ನು ನೇಮಕಗೊಳಿಸಿದೆ.

Advertisement. Scroll to continue reading.

ದತ್ತಪಾದುಕೆ, ಅನುಸೂಯಾ ದೇವಿಯ ಪೂಜೆಗೆ ಅರ್ಚಕರ ನೇಮಕದ ಕುರಿತು ವ್ಯವಸ್ಥಾಪನಾ ಸಮಿತಿ ನಿರ್ಧರಿಸಲಿದೆ.


ಚಿಕ್ಕಮಗಳೂರು ತಾಲೂಕಿನ, ಇನಾಂ ದತ್ತಾತ್ರೇಯ ಪೀಠ ಗ್ರಾಮದ ಶ್ರೀ ಗುರು ದತ್ತಾತ್ರೇಯ ಬಾಬ ಬುಡನ್‌ ಸ್ವಾಮಿ ದರ್ಗಾ/ಪೀಠ ಸಂಯುಕ್ತ ಅಧಿಸೂಚಿತ ಸಂಸ್ಥೆಗೆ ಈ ಕೆಳಕಂಡ ಎಂಟು ಜನರನ್ನು ವ್ಯವಸ್ಥಾಪನಾ ಸಮಿತಿಯ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯದತ್ತಿಗಳ ತಿದ್ದುಪಡಿ ಕಾಯ್ದೆ 2011ರ ಸೆಕ್ಷನ್ 25ರ ಅನ್ವಯ ಹಾಗೂ ಉಚ್ಚ ನ್ಯಾಯಾಲಯದಲ್ಲಿ ದಾಖಲಾಗಿರುವ ರಿಟ್ ಅಪೀಲಿನ ಅಂತಿಮ ಆದೇಶಕ್ಕೆ ಒಳಪಟ್ಟು ಮೂರು ವರ್ಷಗಳ ಅವಧಿಗೆ ಷರತ್ತಿಗೊಳಪಡಿಸಿ ರಚಿಸಿ ಆದೇಶ ಹೊರಡಿಸಲಾಗಿದೆ.

ವ್ಯವಸ್ಥಾಪನಾ ಸಮಿತಿಗೆ ಸತೀಶ್ ಕೆ, ಲೀಲಾ ಸಿ.ಜೆ, ಶೀಲಾ ವೆಂಕಟೇಶ್, ಸುಮಂತ್ ಎನ್.ಎಸ್, ಕೆ.ಎಸ್ ಗುರುವೇಶ್, ಜಿ.ಹೆಚ್ ಹೇಮಂತ್ ಕುಮಾರ್, ಎಸ್.ಎಂ ಭಾಷಾ, ಸಿ.ಎಸ್ ಚೇತನ್​ ಒಟ್ಟು ಎಂಟು ಜನ ಚಿಕ್ಕಮಗಳೂರಿನವರನ್ನು ಆಯ್ಕೆ ಮಾಡಲಾಗಿದೆ

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!