Connect with us

Hi, what are you looking for?

ರಾಷ್ಟ್ರೀಯ

ಬಿಹಾರದಲ್ಲಿ ಭೀಕರ ಅಪಘಾತ: ಮಕ್ಕಳು ಸೇರಿ 15 ಮಂದಿ ಸಾವು; ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

2

ಬಿಹಾರ : ಭೀಕರ ರಸ್ತೆ ಅಪಘಾತದಲ್ಲಿ ಏಳು ಮಕ್ಕಳು ಸೇರಿ 15 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ವೈಶಾಲಿಯ ಮೆಹನಾರ್ ಪ್ರದೇಶದಲ್ಲಿ ನಡೆದಿದೆ.

ವೈಶಾಲಿ ಜಿಲ್ಲೆಯಲ್ಲಿ ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಧಾರ್ಮಿಕ ಮೆರವಣಿಗೆ ನಡೆಯುತ್ತಿತ್ತು.

ಈ ವೇಳೆ ಜನರು ಸ್ಥಳೀಯ ದೇವರಿಗೆ ಪ್ರಾರ್ಥನೆ ಸಲ್ಲಿಸಲು ರಸ್ತೆಬದಿಯಲ್ಲಿರುವ ಅರಳಿ ಮರದ ಮುಂದೆ ನೆರೆದಿದ್ದರು. ಈ ವೇಳೆ ಏಕಾಏಕಿ ವೇಗವಾಗಿ ಬಂದ ಟ್ರಕ್‌ ಅಲ್ಲಿದ್ದ ಜನರಿಗೆ ಗುದ್ದಿದೆ. ಪರಿಣಾಮ 15 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

Advertisement. Scroll to continue reading.

ಪ್ರಧಾನಿ ಮೋದಿ ಸಂತಾಪ

ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ, ಮೃತರ ಕುಟುಂಬಕ್ಕೆ ₹ 2 ಲಕ್ಷ ಹಾಗೂ ಗಾಯಗೊಂಡವರಿಗೆ ₹ 50,000 ಪರಿಹಾರ ಘೋಷಿಸಿದ್ದಾರೆ.

‘ಬಿಹಾರದ ವೈಶಾಲಿಯಲ್ಲಿ ನಡೆದ ಅಪಘಾತವು ನನಗೆ ಬಹಳ ದುಃಖಕರವಾಗಿದೆ. ಮೃತರಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ. ಮೃತರ ಕುಟುಂಬಕ್ಕೆ PMNRF (ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿ) ನಿಂದ ₹ 2 ಲಕ್ಷ ಪರಿಹಾರವನ್ನು ನೀಡಲಾಗುವುದು. ಗಾಯಾಳುಗಳಿಗೆ ₹ 50,000 ನೀಡಲಾಗುವುದು’ ಎಂದು ಪ್ರಧಾನಿ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!