ನವದೆಹಲಿ : ನೂತನ ಸಂಸತ್ ಭವನದಲ್ಲಿ ಭದ್ರತಾ ಲೋಪ ಕಾಣಿಸಿಕೊಂಡಿದ್ದು ಕಲಾಪ ನಡೆಯುತ್ತಿದ್ದ ಸಮಯದಲ್ಲಿ ಅಪರಿಚಿತ ಇಬ್ಬರು ವ್ಯಕ್ತಿ ನುಗ್ಗಿರುವ ಘಟನೆ ಸಂಚಲನ ಮೂಡಿಸಿದೆ.
ಅಪರಿಚಿತ ಸಂದರ್ಶಕರೊಬ್ಬರು ಭದ್ರತೆಯನ್ನು ಉಲ್ಲಂಘಿಸಿ ಗ್ಯಾಲರಿಯಿಂದ ಕೊಠಡಿಗೆ ಹಾರಿದ ಕಾರಣ ಲೋಕಸಭೆಯಲ್ಲಿ ಗೊಂದಲ ಉಂಟಾಯಿತು. ಈ ವೇಳೆ ಸಂಸದರು ತ್ವರಿತವಾಗಿ ಒಳನುಗ್ಗುವವರನ್ನು ಹಿಡಿದು ನಿಗ್ರಹಿಸಿದ್ದಾರೆ. ಸದ್ಯ ಈ ವೀಡಿಯೋ ವೈರಲ್ ಆಗಿದೆ.
Advertisement. Scroll to continue reading.
ಭದ್ರತಾ ಸಿಬ್ಬಂದಿಗೆ ಹಸ್ತಾಂತರಿಸುವ ಮೊದಲು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಲೋಕಸಭಾ ಚೇಂಬರ್ ನಿಂದ ಬಂದ ವೀಡಿಯೊದಲ್ಲಿ ಸಂಸದರು ಒಳನುಗ್ಗುವವರಲ್ಲಿ ಒಬ್ಬನನ್ನು ಥಳಿಸುತ್ತಿರುವುದನ್ನು ಕಾಣಬಹುದು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.