Connect with us

Hi, what are you looking for?

Uncategorized

ಬನ್ನಂಜೆ ಬಾಬು ಅಮೀನ್ ಜಾನಪದ ಪ್ರಶಸ್ತಿ ಪ್ರದಾನ

1

ಉಡುಪಿ : ಯುವವಾಹಿನಿ ಉಡುಪಿ ಘಟಕದ ಆಶ್ರಯದಲ್ಲಿ ರವಿವಾರ ಚಿಟ್ಪಾಡಿಯ ಲಕ್ಷ್ಮೀ ಸಭಾ ಭವನದಲ್ಲಿ ಬನ್ನಂಜೆ ಬಾಬು ಅಮೀನ್‌ ಜಾನಪದ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಿತು.
ಜಾನಪದ ವಿದ್ವಾಂಸ, ಸಂಶೋಧಕ ಕೆ.ಎಲ್. ಕುಂಡಂತಾಯ ಅವರಿಗೆ ಜಾನಪದ ವಿದ್ವಾಂಸ ಪ್ರಶಸ್ತಿ, ಪ್ರಗತಿಪರ ಕೃಷಿಕ, ಕಲಾ ಪೋಷಕ ಎಸ್‌.ಕೆ. ಸಾಲ್ಯಾನ್ ಬೆಳ್ಳಣ್ಣು ಅವರಿಗೆ ಜಾನಪದ ಕಲಾವಿದ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಪ್ರಶಸ್ತಿ ಸ್ವೀಕರಿಸಿದ ಕೆ.ಎಲ್. ಕುಂಡಂತಾಯ ಮಾತನಾಡಿ, ತುಳು ನಾಡು ಭಾವನಾತ್ಮಕ ಕುಟುಂಬ ಪದ್ಧತಿಯನ್ನು ಹೊಂದಿದ್ದು ಇಲ್ಲಿನ ಆಚಾರ ವಿಚಾರಗಳು, ಸಂಸ್ಕೃತಿಯ ಉಳಿವಿಗೆ ಇದರ ಪಾತ್ರ ಮಹತ್ವದ್ದಾಗಿದೆ.ಜಾನಪದ ಕ್ಷೇತ್ರದಲ್ಲಿ ಮಾಡಿದ ಕೆಲಸಕ್ಕೆ ಇಂದು ನನಗೆ ಸಾರ್ಥಕ್ಯದ ಕ್ಷಣ ಎಂದರು.

ಕಲಾ ಪೋಷಕ ಎಸ್.ಕೆ. ಸಾಲ್ಯಾನ್ ಯುವವಾಹಿನಿ ಹಾಗೂ ಬನ್ನಂಜೆ ಬಾಬು ಅಮೀನ್ ರವರ ಸೇವಾ ಮನೋಭಾವದ ಕಾರ್ಯವೈಖರಿಯನ್ನು ಶ್ಲಾಘಿಸಿ, ಇದಕ್ಕೆ ಪೂರಕವಾಗಿ ವಿನಿಯೋಗಿಸಲು ಪ್ರಶಸ್ತಿಯ ಮೊತ್ತಕ್ಕೆ ತನ್ನ ಪಾಲನ್ನು ಸೇರಿಸಿ ಅಧ್ಯಕ್ಷರಿಗೆ ಹಸ್ತಾಂತರಿಸಿದರು.

Advertisement. Scroll to continue reading.

ಸಮಾಜಸೇವಕ ವಿಶು ಶೆಟ್ಟಿ ಅಂಬಲಪಾಡಿ ಹಾಗೂ ಭಜನಾ ಕಲಾವಿದ ಸುರೇಶ್ ಆಚಾರ್ಯ ಕಿದಿಯೂರು ಇವರಿಗೆ ಗೌರವ ಸನ್ಮಾನ ಮಾಡಲಾಯಿತು.


ಬಂಟ್ವಾಳ ಸಂಚಯಗಿರಿ ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರದ ಅಧ್ಯಕ್ಷ ಡಾ. ತುಕರಾಂ ಪೂಜಾರಿ ಪ್ರಶಸ್ತಿ ಪ್ರದಾನ ಮಾಡಿದರು.

ತೆಂಕನಿಡಿಯೂರು ಕಾಲೇಜು ಪ್ರಾಧ್ಯಾಪಕ ಡಾ. ದುಗ್ಗಪ್ಪ ಕಜೆಕಾರ್ ಅಭಿನಂದನ ಭಾಷಣ ಮಾಡಿದರು. ಮಂಗಳೂರು ಯುವ ವಾಹಿನಿ ಕೇಂದ್ರ ಸಮಿತಿ ಎರಡನೇ ಉಪಾಧ್ಯಕ್ಷ ಹರೀಶ್‌ ಕೆ. ಪೂಜಾರಿ, ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಉಪಸ್ಥಿತರಿದ್ದರು.


ಉಡುಪಿ ಯುವವಾಹಿನಿ ಅಧ್ಯಕ್ಷರಾದ ಮಹಾಬಲ ಅಮೀನ್ ಅಧ್ಯಕ್ಷತೆ ವಹಿಸಿದ್ದರು.
ಪ್ರಶಸ್ತಿ ಆಯ್ಕೆ ಸಮಿತಿ ಸಂಚಾಲಕ ಭಾಸ್ಕರ ಸುವರ್ಣ ಸ್ವಾಗತಿಸಿದರು.
ಪ್ರಶಸ್ತಿ ಆಯ್ಕೆ ಸಮಿತಿ ಅಧ್ಯಕ್ಷರಾದ ಮುದ್ದು ಮೂಡುಬೆಳ್ಳೆ ಪ್ರಸ್ತಾವಿಸಿದರು. ಕೇಂದ್ರ ಸಮಿತಿ ಮಾಜಿ ಅಧ್ಯಕ್ಷ ಸಂತೋಷ್ ಕುಮಾರ್, ಕೇಂದ್ರ ಸಮಿತಿ ಕಲೆ ಸಾಂಸ್ಕೃತಿಕ ನಿರ್ದೇಶಕರಾದ ಜಗದೀಶ್ ಕುಮಾರ್,ಮಾಜಿ ಅಧ್ಯಕ್ಷ ನಾರಾಯಣ ಬಿ.ಎಸ್,ಸುಪ್ರೀತ್ ಪ್ರಶಸ್ತಿ ಪುರಸ್ಕೃತರನ್ನು ಪರಿಚಯಿಸಿದರು. ಕಾರ್ಯದರ್ಶಿ ವಿನೋದ್ ಮಂಚಿ ವಂದಿಸಿದರು.ದಯಾನಂದ ಕರ್ಕೇರ ನಿರೂಪಿಸಿದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!