Connect with us

Hi, what are you looking for?

ಕರಾವಳಿ

ಮತದಾರರ ಪಟ್ಟಿಯಲ್ಲಿ ಹೆಸರು ಕಣ್ಮರೆ; ಬಿಎಲ್‌ಒ ಮತ್ತು ಅಂಚೆ ಇಲಾಖೆ ಶಾಮೀಲು: ಆಮ್ ಆದ್ಮಿ ಪಾರ್ಟಿ ದ.ಕ.ಜಿಲ್ಲಾ ಸಮಿತಿ ಆರೋಪ

0

ಮಂಗಳೂರು: ದ.ಕ.ಜಿಲ್ಲಾಡಳಿತವು ಇತ್ತೀಚೆಗೆ ಬಿಡುಗಡೆ ಮಾಡಿದ ಮತದಾರರ ಪಟ್ಟಿಯಿಂದ ಹೆಸರು ಕಣ್ಮರೆ ಪ್ರಕರಣದ ಹಿಂದೆ ಬಿಎಲ್‌ಒ ಮತ್ತು ಅಂಚೆ ಇಲಾಖೆಯು ಶಾಮೀಲಾಗಿದೆ ಎಂದು ಆಮ್ ಆದ್ಮಿ ಪಾರ್ಟಿ ದ.ಕ.ಜಿಲ್ಲಾ ಸಮಿತಿ ಆರೋಪಿಸಿದೆ.

ನಗರದ ಜ್ಯೋತಿ ಬಳಿಯಲ್ಲಿರುವ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷ ಸಂತೋಷ್ ಕಾಮತ್, ಜಿಲ್ಲೆಯ ಮತದಾರರ ಪಟ್ಟಿಯಿಂದ ಅನೇಕ ಮಂದಿಯ ಹೆಸರು ಡಿಲೀಟ್ ಆಗಿದೆ. ಉದ್ದೇಶಪೂರ್ವಕವಾಗಿ ನಡೆಸಲಾದ ಈ ಕೃತ್ಯದಲ್ಲಿ ಬಿಎಲ್‌ಒ ಮತ್ತು ಅಂಚೆ ಇಲಾಖೆಯವರು ಕೂಡ ಶಾಮೀಲಾಗಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಾಮಾಜಿಕ ಕಾರ್ಯಕರ್ತ ಈಶ್ವರ್‌ರಾಜ್ ಮಾತನಾಡಿ, ನಗರ ಹೊರವಲಯದ ಅರ್ಕುಳ ಗ್ರಾಮದ ಮೇರ್ಲಪದವಿನಲ್ಲಿ ಅಂಚೆ ಇಲಾಖೆಯವರು ಶಾಮಿಲಾಗಿ ನಿರ್ದಿಷ್ಟ ಮತದಾರರ ಪಟ್ಟಿಯನ್ನು ಅಕ್ರಮವಾಗಿ ತಿದ್ದುಪಡಿ ಮಾಡಿದ್ದಾರೆ. ನಗರದ ಮಂಗಳಾದೇವಿ ವಾರ್ಡ್ ಸಮಿತಿಯಲ್ಲಿ ತಾನು ಸದಸ್ಯನಾಗಿರಬಾರದು ಎಂಬ ಏಕೈಕ ಕಾರಣಕ್ಕೆ ತನ್ನ ಹೆಸರನ್ನೇ ಪಟ್ಟಿಯಿಂದ ಕಿತ್ತು ಹಾಕಲಾಗಿದೆ ಎಂದು ಆರೋಪಿಸಿದ್ದಾರೆ.

Advertisement. Scroll to continue reading.

ಸುದ್ದಿಗೋಷ್ಠಿಯಲ್ಲಿ ಆಮ್ ಆದ್ಮಿ ಪಾರ್ಟಿಯ ಮಾಧ್ಯಮ ಸಂಚಾಲಕ ವೆಂಕಟೇಶ್ ಬಾಳಿಗಾ, ಮಹಿಳಾ ಘಟಕದ ಅಧ್ಯಕ್ಷೆ ಬೆನೆಟ್ ನವಿತಾ ಮೊರಾಸ್, ಮುಖಂಡ ಸ್ಟೀಫನ್ ಪಿಂಟೊ, ಆಮ್ ಆದ್ಮಿ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಅಝ್ಫರ್ ರಜಾಕ್ ಮತ್ತಿತರರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!