Connect with us

Hi, what are you looking for?

ರಾಜ್ಯ

ಪತಿಯ ಅನೈತಿಕ ಸಂಬಂಧದಿಂದ ಬೇಸತ್ತು ಗೃಹಿಣಿ ಆತ್ಮಹತ್ಯೆ

1

ಚಿಕ್ಕಬಳ್ಳಾಪುರ : ಪತಿಯ ಅನೈತಿಕ ಸಂಬಂಧದಿಂದ ಬೇಸತ್ತು ಗೃಹಿಣಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗೇಪಲ್ಲಿ ಪಟ್ಟಣದ ಸಂತೆಬೀದಿ ಬಡಾವಣೆಯಲ್ಲಿ ಬುಧವಾರ ನಡೆದಿದೆ.

ಮೋನಿಕಾ(32) ಆತ್ಮಹತ್ಯೆಗೆ ಶರಣಾದ ಮಹಿಳೆ. ಶಿಡ್ಲಘಟ್ಟ ತಾಲೂಕಿನ ಎಸ್ ಗುಂಡ್ಲುಹಳ್ಳಿ ಗ್ರಾಮದ ಮೋನಿಕಾರನ್ನು 13 ವರ್ಷಗಳ ಹಿಂದೆ ಬಾಗೇಪಲ್ಲಿ ಪಟ್ಟಣದ ಸಂತೆಬೀದಿ ಬಡಾವಣೆಯ ಗುರುಮೂರ್ತಿ ಎಂಬುವರೊಂದಿಗೆ ಮದುವೆ ಮಾಡಿಕೊಡಲಾಗಿತ್ತು.

ಪೋಷಕರು 50 ಲಕ್ಷ ರೂ. ಮೌಲ್ಯದ ಜಮೀನು ಮಾರಾಟ ಮಾಡಿ 40 ಲಕ್ಷ ವೆಚ್ಚದಲ್ಲಿ ಅದ್ಧೂರಿ ವಿವಾಹ ಮಾಡಿದ್ದರು ಎಂದು ತಿಳಿದುಬಂದಿದೆ.

Advertisement. Scroll to continue reading.

ಆದರೆ ಗುರುಮೂರ್ತಿ ಬೇರೊಬ್ಬ ಮಹಿಳೆ ಜೊತೆ ವಿವಾಹೇತರ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಜೊತೆಗೆ ತಮ್ಮ ಮಗಳಿಗೆ ಕಿರುಕುಳ ನೀಡುತ್ತಿದ್ದ ಎಂದು ‌ಹೇಳಲಾಗಿದೆ. ಇದರಿಂದ ನೊಂದಿದ್ದ ಮೋನಿಕಾ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆರೋಪಿ ಗುರುಮೂರ್ತಿ ವಿರುದ್ಧ ಮೃತ ಮೋನಿಕಾ ತಂದೆ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!