Connect with us

Hi, what are you looking for?

ಸಿನಿಮಾ

ಕಾಂತಾರ ಸಿನಿಮಾ ಬಗ್ಗೆ ವಿವಾದಾತ್ಮಕ ಹೇಳಿಕೆ: ನಟ ಚೇತನ್ ಪ್ರಕರಣ ರದ್ದತಿಗೆ ಹೈಕೋರ್ಟ್ ನಕಾರ

2

ಚಂದನವನ : ರಿಷಭ್ ಶೆಟ್ಟಿ ಅಭಿನಯದ ಕಾಂತಾರ ಸಿನಿಮಾ ಬಗ್ಗೆ ನಟ ಚೇತನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಹೀಗಾಗಿ ಅವರ ವಿರುದ್ಧ ಪ್ರಕರಣ ಕೂಡ ದಾಖಲಾಗಿತ್ತು. ಈ ಪ್ರಕರಣ ರದ್ದುಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದ ಚೇತನ್‌ಗೆ ಹಿನ್ನಡೆಯಾಗಿದೆ. ಕೋರ್ಟ್ ಪ್ರಕರಣ ರದ್ದುಗೊಳಿಸಲು ನಿರಾಕರಿಸಿದೆ.

ಕಾಂತಾರ ಚಿತ್ರದಲ್ಲಿನ ಭೂತಕೋಲದ ಬಗ್ಗೆ ನಟ ಚೇತನ್ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಈ ಬಗ್ಗೆ ನಗರದ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಬಜರಂಗದಳದ ಕಾರ್ಯಕರ್ತ ಶಿವಕುಮಾರ್ ಎಂಬವರು ದೂರು ನೀಡಿದ್ದರು.

ಹಿನ್ನಲೆಯಲ್ಲಿ ಅಕ್ಟೋಬರ್ 22ರಂದು ಪ್ರಕರಣ ದಾಖಲಿಸಿಕೊಂಡಿದ್ದಂತಹ ಪೊಲೀಸರು, ನಟ ಚೇತನ್ ವಿರುದ್ಧ ತನಿಖೆ ಕೈಗೊಂಡಿದ್ದರು. ಈ ಬೆನ್ನಲ್ಲೇ ಪ್ರಕರಣವನ್ನು ರದ್ದು ಮಾಡುವಂತೆ ನಟ ಚೇತನ್ ಅರ್ಜಿ ಸಲ್ಲಿಸಿದ್ದರು.

Advertisement. Scroll to continue reading.

ಇಂದು ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಂತ ಹೈಕೋರ್ಟ್ ನ ನ್ಯಾಯಮೂರ್ತಿ ಎಂ.ಐ ಅರುಣ್ ಅವರಿದ್ದಂತಹ ನ್ಯಾಯಪೀಠ, ಈ ಪ್ರಕರಣ ತನಿಖಾ ಹಂತದಲ್ಲಿದೆ. ಈ ವೇಳೆ ನ್ಯಾಯಾಲಯದ ಹಸ್ತಕ್ಷೇಪ ಸರಿಯಲ್ಲ ಎಂಬುದಾಗಿ ಅಭಿಪ್ರಾಯ ಪಟ್ಟಿತು. ಅಲ್ಲದೇ ಈ ಹಿಂದಿನ ಹಲವು ತೀರ್ಪುಗಳನ್ನು ಆಧರಿಸಿ ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!