ಟೀಮ್ ಇಂಡಿಯಾದ ವಿಕೆಟ್ ಕೀಪರ್, ಬ್ಯಾಟ್ಸ್ ಮಾನ್ ಇಶಾನ್ ಕಿಶನ್ ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಿಂದ ಔಟ್ ಆಗಿದ್ದಾರೆ. ವೈಯಕ್ತಿಕ ಕಾರಣದಿಂದಾಗಿ ತವರಿಗೆ ಮರಳಿದ್ದಾರೆ. ಹೀಗಾಗಿ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ ತಂಡದಿಂದ ಹೊರಗುಳಿದಿದ್ದಾರೆ.
ಪ್ರಸ್ತುತ ದಕ್ಷಿಣ ಆಫ್ರಿಕಾದಲ್ಲಿರುವ ಕೆಎಸ್ ಭರತ್ ಅವರನ್ನು ಬದಲಿ ಆಟಗಾರನಾಗಿ ಬಿಸಿಸಿಐ ಆಯ್ಕೆ ಮಾಡಿದೆ.
“ವೈಯಕ್ತಿಕ ಕಾರಣಗಳನ್ನು ಉಲ್ಲೇಖಿಸಿ ಮುಂಬರುವ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಬಿಡುಗಡೆ ಮಾಡುವಂತೆ ಇಶಾನ್ ಕಿಶನ್ ಬಿಸಿಸಿಐಗೆ ಮನವಿ ಮಾಡಿದ್ದಾರೆ. ವಿಕೆಟ್ ಕೀಪರ್ ಅನ್ನು ನಂತರ ಟೆಸ್ಟ್ ತಂಡದಿಂದ ಹಿಂತೆಗೆದುಕೊಳ್ಳಲಾಗಿದೆ. ಪುರುಷರ ಆಯ್ಕೆ ಸಮಿತಿಯು ಕೆಎಸ್ ಭರತ್ ಅವರನ್ನು ಬದಲಿ ಆಟಗಾರನಾಗಿ ಹೆಸರಿಸಿದೆ”ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ.
ಇನ್ನು, ಮೊದಲ ಪಂದ್ಯ ಡಿಸೆಂಬರ್ 26-30 ರಂದು ಮತ್ತು ಎರಡನೇ ಪಂದ್ಯವು 2024 ರ ಜನವರಿ 3-7 ರಂದು ನಿಗದಿಯಾಗಿದೆ.
ಹೀಗಿದೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಋತುರಾಜ್ ಗಾಯಕ್ವಾಡ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ. ಸಿರಾಜ್, ಮುಖೇಶ್ ಕುಮಾರ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ, ಕೆಎಸ್ ಭರತ್ (ವಿಕೆಟ್ ಕೀಪರ್).