ಕಾರವಾರ : ಹಳೆಯ ಮನೆ ಗೋಡೆ ತೆರವುಗೊಳಿಸುವಾಗ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ಅಂಕೋಲಾ ತಾಲೂಕಿನ ಭಾವಿಕೇರಿಯಲ್ಲಿ ನಡೆದಿದೆ.
ಭಾವಿಕೇರಿ ನಿವಾಸಿ ಮಧುಕರ ನಾಯಕ (58) ಹಾಗೂ ಶಾಂತಾರಾಮ ನಾಯಕ (58) ಮೃತಪಟ್ಟವರು.
ಮಧುಕರ ನಾಯಕ ಅವರ ಹಳೆಯ ಮನೆಯ ಗೋಡೆ ತೆರವುಗೊಳಿಸಲು ಹೋಗಿದ್ದರು. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಗೋಡೆ ಕುಸಿದು ಬಿದ್ದಿದೆ. ಪರಿಣಾಮ ಮಣ್ಣಿನ ಅಡಿಯಲ್ಲಿ ಸಿಲುಕಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದರು.
Advertisement. Scroll to continue reading.

ಇವರನ್ನು ಪ್ರತ್ಯೇಕವಾಗಿ ಮಂಗಳೂರು ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಓರ್ವ ಕುಮಟಾ ಮಿರ್ಜಾನ್ ಬಳಿ, ಇನ್ನೋರ್ವ ಕುಂದಾಪುರದ ಬೈಂದೂರು ಬಳಿ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.
