ಚಂದನವನ : ಕೆಜಿಎಫ್ ಸಿನಿಮಾದಲ್ಲಿ ಕುರುಡ ಮುದುಕನ ಪಾತ್ರ ನಿಭಾಯಿಸಿದ ಹಿರಿಯ ನಟ ಕೃಷ್ಣ ಜಿ. ರಾವ್ ಆಸ್ಪತ್ರೆಗೆ ಗುರುವಾರ ದಾಖಲಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ತಿಳಿದುಬಂದಿದೆ.
ಕೆಜಿಎಫ್ ತಾತ ಎಂದೇ ಫೇಮಸ್ ಆಗಿದ್ದ ಹಿರಿಯ ನಟ ಕೃಷ್ಣ ಜಿ ರಾವ್, ಕೆಮಿಸ್ಟ್ರೀ ಆಫ್ ಕರಿಯಪ್ಪ ಸಿನಿಮಾದ ಸಾರಥಿ ಕುಮಾರ್ ನಿರ್ದೇಶನದ ಹೊಸ ಸಿನಿಮಾ ‘ನ್ಯಾನೋ ನಾರಾಯಣಪ್ಪʼ ಚಿತ್ರದಲ್ಲಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು.
Advertisement. Scroll to continue reading.

ಹತ್ತು ತಲೆಯುಳ್ಳ ರಾವಣನ ಅವತಾರದಲ್ಲಿ ರಿಲೀಸ್ ಆಗಿರುವ ಫಸ್ಟ್ ಲುಕ್ನಲ್ಲಿ ಕೃಷ್ಣ ಜಿ ರಾವ್ ಕಿರೀಟ, ಗ್ಲಾಸ್ ಹಾಕಿ ಫೋಸ್ ಕೊಟ್ಟಿದ್ದು, ನ್ಯಾನೋ ಕಾರು ಕೂಡ ಹೈಲೈಟ್ ಆಗಿತ್ತು.
ಪ್ರಶಾಂತ್ ನೀಲ್ ನಿರ್ದೇಶನದ ಸಲಾರ್ ಚಿತ್ರದಲ್ಲಿಯೂ ಅವಕಾಶ ಸಿಕ್ಕಿದೆ. ಕೆಜಿಎಫ್ 2 ಬಿಡುಗಡೆಯ ನಂತರ 15 ಚಿತ್ರದಲ್ಲಿ ನಟಿಸಿದ್ದಾರೆ.
Advertisement. Scroll to continue reading.

In this article:Diksoochi news, diksoochi Tv, diksoochi udupi, Krishna G.Rao, ಕೃಷ್ಣ ಜಿ.ರಾವ್, ಕೆಜಿಎಫ್ 2

Click to comment