Connect with us

Hi, what are you looking for?

Diksoochi News

ರಾಜ್ಯ

ಆಸ್ತಿಗಾಗಿ ಕಿಡ್ನ್ಯಾಪ್; ಪ್ರಜ್ವಲ್ ರೇವಣ್ಣ, ಭವಾನಿ ವಿರುದ್ಧ ಗಂಭೀರ ಆರೋಪ

1

ಹಾಸನ : ಆಸ್ತಿ ಮಾರಾಟ ಮಾಡುವಂತೆ ಒತ್ತಾಯಿಸಿ ಮಾಜಿ ಕಾರು ಚಾಲಕನನ್ನು ಕಿಡ್ನಾಪ್ ಮಾಡಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಹಾಗೂ ಇವರ ತಾಯಿ ಭವಾನಿ ರೇವಣ್ಣ ವಿರುದ್ಧ ಆರೋಪ ಕೇಳಿಬಂದಿದೆ.

ತನಗೆ ನ್ಯಾಯ ನೀಡುವಂತೆ ಕಾರ್ತಿಕ್ ದಕ್ಷಿಣ ವಲಯ ಐಜಿಪಿಗೆ ದೂರು ನೀಡಿದ್ದಾರೆ ಎಂಬ ವಿಚಾರ ಇದೀಗ ತಡವಾಗಿ ಬೆಳಿಕಿಗೆ ಬಂದಿದೆ

ಕಾರ್ತಿಕ್ ದಶಕಗಳ ಕಾಲ ಪ್ರಜ್ವಲ್ ರೇವಣ್ಣ ಅವರ ಕಾರು ಚಾಲಕನಾಗಿದ್ದರು. ಆದರೆ, ಹೊಳೆನರಸೀಪುರ ತಾಲೂಕಿನಲ್ಲಿರುವ 13 ಎಕರೆ ಭೂಮಿಯನ್ನು ಮಾರಾಟ ಮಾಡುವಂತೆ ಒತ್ತಾಯಿಸಿ ತನ್ನನ್ನು ಹಾಗೂ ತನ್ನ ಪತ್ನಿಯನ್ನು ಕಿಡ್ನಾಪ್ ಮಾಡಿ ಚಿತ್ರಹಿಂಸೆ ನೀಡಿದ್ದಾರೆ ಎಂದು ಕಾರ್ತಿಕ್, ಪ್ರಜ್ವಲ್ ರೇವಣ್ಣ ಹಾಗೂ ಭವಾನಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

Advertisement. Scroll to continue reading.

2023 ರ ಮಾರ್ಚ್ 12 ರಂದು ಕಿಡ್ನಾಪ್ ಮಾಡಿದ್ದು, ಏಪ್ರಿಲ್ ತಿಂಗಳಲ್ಲಿ ಪೊಲೀಸರಿಗೆ ದೂರು ನೀಡಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳ ಸಹಿತ ಇನ್ನಿತರ ದಾಖಲೆಗಳನ್ನು ಪೊಲೀಸರಿಗೆ ನೀಡಿದ್ದರು. ಬಲವಂತವಾಗಿ ಕರೆದೊಯ್ದು ನನ್ನ 13 ಎಕರೆ ಭೂಮಿಯನ್ನು ಬೇರೆಯವರ ಹೆಸರಿಗೆ ವರ್ಗಾವಣೆ ಮಾಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. 

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!