2024ರ ಐಪಿಎಲ್ ಆಟಗಾರರ ಹರಾಜು ಪ್ರಕ್ರಿಯೆ ದುಬೈನಲ್ಲಿ ನಡೆಯುತ್ತಿದೆ. ಆಸ್ಟ್ರೇಲಿಯಾದ ಕ್ರಿಕೆಟಿಗ ಮಿಚೆಲ್ ಸ್ಟಾರ್ಕ್ 2024ರ ಐಪಿಎಲ್ ಹರಾಜಿನಲ್ಲಿ ದಾಖಲೆ ಬರೆದಿದ್ದಾರೆ. ಹೌದು, ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ ಇದುವರೆಗೆ ಮಾಡಿದ ಅತ್ಯಂತ ದುಬಾರಿ ಖರೀದಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.
ಕೆಕೆಆರ್ ತಂಡವು ಸ್ಟಾರ್ಕ್ ಅವರನ್ನು 24.75 ಕೋಟಿ ರೂ.ಗೆ ಖರೀದಿಸಿದೆ.
ಇನ್ನು ಶಿವನ್ ಮಾವಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಪಾಲಾಗಿದ್ದು, 6 ಕೋಟಿ 40 ಲಕ್ಷಕ್ಕೆ ಖರೀದಿಸಲಾಗಿದೆ. ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 11.5 ಕೋಟಿ ರೂ.ಗೆ ಅಲ್ಜಾರಿ ಜೋಸೆಫ್ನ್ನು ಖರೀದಿಸಿದೆ.
Advertisement. Scroll to continue reading.