ವರದಿ : ದಿನೇಶ್ ರಾಯಪ್ಪನಮಠ
ಕೋಟ : ಕುಂಭಾಸಿ ಆನೆಗುಡ್ಡೆ ಶ್ರೀವಿನಾಯಕ ದೇವಸ್ಥಾನಕ್ಕೆ ಖ್ಯಾತ ನಟ, ನಿರ್ದೇಶಕ ರಿಷಭ್ ಶೆಟ್ಟಿ ಕುಟುಂಬ ಸಮೇತರಾಗಿ ಸೋಮವಾರ ಆಗಮಿಸಿ ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ದೇವಳದಿಂದ ರಿಷಭ್ ಶೆಟ್ಟಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ಭಾರತೀಯ ಚಿತ್ರರಂಗದಲ್ಲೇ ಅತ್ಯದ್ಭುತ ಯಶಸ್ಸು ಕಂಡ ಕಾಂತಾರ ಸಿನಿಮಾದ ಮೂಹರ್ತ ಇದೇ ದೇವಸ್ಥಾನದಲ್ಲಿ ನಡೆದಿತ್ತು. ಯಶಸ್ಸಿನ ಪ್ರತಿಫಲವಾಗಿ ರಿಷಭ್ ಪತ್ನಿ ಪ್ರಗತಿ ಶೆಟ್ಟಿ, ಮಕ್ಕಳಾದ ರಣ್ವಿತ್ ಶೆಟ್ಟಿ, ರಾಧ್ಯಾ ಶೆಟ್ಟಿ ಮತ್ತು ಕುಟುಂಬಿಕರು ಆನೆಗುಡ್ಡೆ ವಿನಾಯಕನಿಗೆ ಪ್ರಿಯವಾದ ಮುಡಿಅಕ್ಕಿ ಕಡಬು ಸೇವೆ ನೀಡಿ ಪ್ರಾರ್ಥನೆ ಸಲ್ಲಿಸಿ ವಿಶೇಷ ಪೂಜೆ ಸಲ್ಲಿಸಿದರು.
Advertisement. Scroll to continue reading.

ಈ ಸಂದರ್ಭ ಆನೆಗುಡ್ಡೆ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ.ಶ್ರೀರಮಣ ಉಪಾಧ್ಯಾಯ, ಹಿರಿಯ ಮೊಕ್ತೇಸರ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಪರ್ಯಾಯ ಅರ್ಚಕರಾದ ಕೆ.ದೇವಿದಾಸ್ ಉಪಾಧ್ಯಾಯ, ಅರ್ಚಕ ಮಂಡಳಿ ಸದಸ್ಯರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
In this article:Anegudde Temple, diksoochi Tv, diksoochi udupi, Rishab Shetty, ಕಾಂತಾರ, ರಿಷಭ್ ಶೆಟ್ಟಿ

Click to comment