ಬೆಂಗಳೂರು : ಜೆಡಿಎಸ್ ನಾಯಕ ಎಚ್.ಡಿ. ರೇವಣ್ಣ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣ ಅವರ ವಿರುದ್ದದ ಚುನಾವಣಾ ತಕರಾರು ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಬುಧವಾರ ವಜಾಗೊಳಿಸಿ ಆದೇಶಿಸಿದೆ.
ಸೂರಜ್ ರೇವಣ್ಣ ಅವರನ್ನು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸುವಂತೆ ಕೋರಿ ವಕೀಲ ದೇವರಾಜೇಗೌಡ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ. ಇದರಿಂದ ಸೂರಜ್ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ.
ವಕೀಲ ದೇವರಾಜೇಗೌಡ ಅವರು ಎಂಎಲ್‌ಸಿ ಸೂರಜ್ ರೇವಣ್ಣರ ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ಲೋಕಸಭೆ ಚುನಾವಣೆಯಲ್ಲಿ ಅಕ್ರಮ ನಡೆಸಿದ್ದ ಆರೋಪ ಮಾಡಿದ್ದರು. ಚುನಾವಣಾ ಅಕ್ರಮದ ಕಾರಣಕ್ಕೆ ವಜಾಗೊಳಿಸಲು ಕೋರ್ಟ್‌ಗೆ ಅರ್ಜಿ ಸಲ್ಲಿಸಿ ಮನವಿ ಮಾಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಎಂ.ನಾಗಪ್ರಸನ್ನ ಹೈಕೊರ್ಟ್ ಪೀಠ, ಇಂದು ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿದೆ.
Advertisement. Scroll to continue reading.
In this article:case, H D Kumaraswamy, H.D.Devegowda, hasana, revanna, sooraj revanna
Click to comment