ಉಡುಪಿ : ಉಡುಪಿ ನಗರಸಭೆಯ 13 ನೇ ಮೂಡು ಪೆರಂಪಳ್ಳಿ ವಾರ್ಡ್ನ ಉಪಚುನಾವಣೆಯು ಡಿಸೆಂಬರ್ 27 ರಂದು ನಡೆಯಲಿರುವ ಹಿನ್ನೆಲೆ, ಡಿ. 26 ರ ಬೆಳಗ್ಗೆ 6 ಗಂಟೆಯಿಂದ ಡಿ. 27 ರ ರಾತ್ರಿ 12 ಗಂಟೆಯವರೆಗೆ ಸದರಿ ವಾರ್ಡ್ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯ ಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಿಲರಿ, ಸ್ಟಾರ್ ಹೋಟೆಲ್ ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿ, ಮದ್ಯ ಮಾರಾಟ ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.
Advertisement. Scroll to continue reading.