ಅನಾರೋಗ್ಯದಿಂದ ಬಳಲುತ್ತಿದ್ದ ತನ್ನ ಸಹೋದರನಿಗೆ ಕಿಡ್ನಿ ದಾನ ಮಾಡಿದಕ್ಕೆ ವ್ಯಕ್ತಿಯೊಬ್ಬ ತನ್ನ ಪತ್ನಿಗೆ ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ನೀಡಿದ ಆಘಾತಕಾರಿ ಘಟನೆ ನಡೆದಿದೆ. ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದರೆ, ಪತ್ನಿ ಉತ್ತರ ಪ್ರದೇಶದ ಬೈರಿಯಾಹಿ ಗ್ರಾಮದಲ್ಲಿ ನೆಲೆಸಿದ್ದಾರೆ.
ಪತ್ನಿ ತನ್ನ ಒಂದು ಕಿಡ್ನಿಯನ್ನು ದಾನ ಮಾಡುವ ಮೂಲಕ ತನ್ನ ಸಹೋದರನನ್ನು ಉಳಿಸಿದ್ದಾಳೆ. ಆದರೆ, ಇದು ಆಕೆಯ ಸಂಸಾರವನ್ನು ಹಾಳು ಮಾಡಿದೆ. ಕಿಡ್ನಿ ದಾನದ ಬಗ್ಗೆ ತಿಳಿಸಲೆಂದು ಸಂದೇಶ ಕಳುಹಿಸಿದ ಕೂಡಲೇ ಪತಿ ಆಕೆಗೆ ತ್ರಿವಳಿ ತಲಾಖ್ ನೀಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಮಹಿಳೆಯ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Advertisement. Scroll to continue reading.
ತ್ರಿವಳಿ ತಲಾಖ್ ಪದ್ಧತಿಯನ್ನು 2019 ರಲ್ಲಿ ದೇಶದಲ್ಲಿ ಕಾನೂನುಬಾಹಿರ ಮತ್ತು ಅಸಂವಿಧಾನಿಕ ಎಂದು ಘೋಷಿಸಲಾಗಿದೆ.