Connect with us

Hi, what are you looking for?

Diksoochi News

ರಾಷ್ಟ್ರೀಯ

ತಮಿಳುನಾಡು ಸಚಿವ ಪೊನ್ಮುಡಿಗೆ 3 ವರ್ಷ ಜೈಲು

0

ಚೆನ್ನೈ : ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಚಿವ ಪೊನ್ಮುಡಿ ಅವರಿಗೆ ಮದ್ರಾಸ್ ಹೈಕೋರ್ಟ್ ಗುರುವಾರ ಮೂರು ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

1.75 ಕೋಟಿ ರೂ. ಅಕ್ರಮ ಆಸ್ತಿ ಪ್ರಕರಣದಲ್ಲಿ ಡಿಎಂಕೆ ನಾಯಕ ಮತ್ತು ಅವರ ಪತ್ನಿಯನ್ನು ದೋಷಿಗಳು ಎಂದು ಮದ್ರಾಸ್ ಹೈಕೋರ್ಟ್ ಎರಡು ದಿನಗಳ ಹಿಂದೆ ತೀರ್ಪು ನೀಡಿ ಇಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಿದೆ. 

ಸಚಿವ ಹಾಗೂ ಅವರ ಪತ್ನಿ ವಿಶಾಲಾಕ್ಷಿ ಅವರಿಗೆ ನ್ಯಾಯಾಲಯ 50 ಲಕ್ಷ ರೂ.ಗಳ ದಂಡ ವಿಧಿಸಿದೆ.

Advertisement. Scroll to continue reading.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಖುಲಾಸೆಗೊಳಿಸಿದ ವಿಚಾರಣಾ ನ್ಯಾಯಾಲಯದ ಆದೇಶವನ್ನು ರದ್ದುಗೊಳಿಸಿತು.

ಸದ್ಯ ಪೊನ್ಮುಡಿಯ ಉನ್ನತ ಶಿಕ್ಷಣ ಖಾತೆಯನ್ನು ಅವರ ಸಹೋದ್ಯೋಗಿಗಳಿಗೆ ಹಸ್ತಾಂತರಿಸುವ ಸಾಧ್ಯತೆಗಳಿವೆ. ಕಾನೂನಿನಡಿಯಲ್ಲಿ, ಶಾಸಕಾಂಗ ವ್ಯವಸ್ಥೆಯ ಸದಸ್ಯರು ತಪ್ಪಿತಸ್ಥರಾದರೆ ಸಂಸತ್ತು ಅಥವಾ ವಿಧಾನಸಭೆಯಿಂದ ಅವರು ಅನರ್ಹರಾಗುತ್ತಾರೆ.

2006 ರಿಂದ 2011 ರ ಅವಧಿಯಲ್ಲಿ ಪೊನ್ಮುಡಿ ಅವರು ಡಿಎಂಕೆ ನೇತೃತ್ವದ ಆಡಳಿತದಲ್ಲಿ ಸಚಿವರಾಗಿದ್ದಾಗ ಅವರ ಹೆಸರಲ್ಲಿ ಮತ್ತು ಅವರ ಪತ್ನಿಯ ಹೆಸರಿನಲ್ಲಿ ಸುಮಾರು 65.99% ಕ್ಕೂ ಹೆಚ್ಚಿನ ಆದಾಯ ಗಳಿಸಿದ್ದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!