ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವರ್ಷದ ಬಳಿಕ ಕೊರೋನಾ ಮೊದಲ ಪ್ರಕರಣ ಪತ್ತೆಯಾಗಿದೆ. ಉಡುಪಿ ಮೂಲದ 82 ವರ್ಷದ ವೃದ್ಧರೋರ್ವರಲ್ಲಿ ಪಾಸಿಟಿವ್ ಪತ್ತೆಯಾಗಿದೆ.
ಮಂಗಳೂರಿನ ಖಾಸಗಿ ಆಸ್ಪತ್ರೆಗೆ ನರ ಸಂಬಂಧಿ ಕಾಯಿಲೆಗೆ ಬಂದಿರುವ ಅವರನ್ನು ಆ್ಯಂಟಿಜೆನ್ ಟೆಸ್ಟ್ ಮಾಡಿಸಿದಾಗ ಅದರಲ್ಲಿ ಪಾಸಿಟಿವ್ ಪತ್ತೆಯಾಗಿದೆ.
ಪಾಸಿಟಿವ್ ಬಂದಿರುವ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಯ ಐಸೋಲೇಷನ್ ವಾರ್ಡ್ಗೆ ಅವರನ್ನು ದಾಖಲಿಸಲಾಗಿದೆ. ಸದ್ಯ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
Advertisement. Scroll to continue reading.