ಬೆಂಗಳೂರು : ದೇಶದಾದ್ಯಂತ ಸಂಚಲನ ಸೃಷ್ಠಿಸಿದ್ದ ಹಿಜಾಬ್ ನಿಷೇಧವನ್ನು ಇದೀಗ ಸಿದ್ದರಾಮಯ್ಯ ವಾಪಾಸು ಪಡೆಯುತ್ತೇವೆ ಎಂದು ಹೇಳಿದ್ದಾರೆ.
ಇಂದು ಸಿದ್ದರಾಮಯ್ಯ ಅವರು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ವತಿಯಿಂದ ಕವಲಂದೆ ಪೊಲೀಸ್ ಠಾಣೆಯಲ್ಲಿ ಆಯೋಜಿಸಿರುವ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣಿಗಳ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
ಉಡುಪು ಅವರವರ ಇಷ್ಟ. ಹಿಜಾಬ್ ನಿಷೇಧ ವಾಪಾಸ್ ಗೆ ಹೇಳಿದೀನಿ. ಪ್ರಧಾನಿ ಮೋದಿ ಅವರ ಸಬ್ ಕಾ ಸಾಥ್-ಸಬ್ ಕಾ ವಿಕಾಸ್ ಎನ್ನುವುದು ಬೋಗಸ್. ಬಟ್ಟೆ, ಉಡುಪು, ಜಾತಿ, ಆಧಾರದ ಮೇಲೆ ಜನರನ್ನು ವಿಭಜಿಸುವ, ಸಮಾಜವನ್ನು ವಿಭಜಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ. ಹಿಜಾಬ್ ನಿಷೇಧವನ್ನು ವಾಪಾಸ್ ಪಡೆಯಲು ಹೇಳಿದೀನಿ ಎಂದಿದ್ದಾರೆ.
ಉಡುಪಿಯಿಂದ ಆರಂಭಗೊಂಡಿದ್ದ ಹಿಜಾಬ್ ಹೋರಾಟ ದೇಶಾದ್ಯಂತ ಭಾರಿ ಪ್ರತಿಭಟನೆ, ಹೋರಾಟಕ್ಕೆ ಕಾರಣವಾಗಿತ್ತು. ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಕೋರ್ಟ್, ಹಿಜಾಬ್ ಇಸ್ಲಾಂ ಧರ್ಮದ ಕಡ್ಡಾಯವಲ್ಲ. ಶಾಲಾ ಕಾಲೇಜು ಆಡಳಿತ ಮಂಡಳಿ ನಿರ್ಧರಿಸಿದ ಸಮವಸ್ತ್ರ ಧರಿಸಬೇಕು ಎಂದು ಘೋಷಿಸಿತ್ತು.