ಬೆಂಗಳೂರು : ರಾಜ್ಯದಲ್ಲಿ ಇಂದು ಹೊಸದಾಗಿ 78 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ.
ಇನ್ನು ಬೆಂಗಳೂರು ನಗರದಲ್ಲೇ ಹೊಸದಾಗಿ 68 ಜನರಿಗೆ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಸಕ್ರಿಯ ಕೇಸ್ಗಳ ಸಂಖ್ಯೆ 175ಕ್ಕೆ ಏರಿಕೆಯಾಗಿದ್ದು, 162 ಸೋಂಕಿತರು ಹೋಂ ಐಸೋಲೇಷನ್ನಲ್ಲಿ ಇದ್ದರೆ, 13 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇಕಡಾ 3.29 ಕ್ಕೆ ಏರಿಕೆಯಾಗಿದೆ.
Advertisement. Scroll to continue reading.