ಕೊಲ್ಲೂರು : ಆಕಸ್ಮಿಕವಾಗಿ ಇಲಿ ಪಾಷಾಣ ಸೇವಿಸಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಕೊಲ್ಲೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪ್ರಕಾಶ್(೬೨) ಮೃತ ವ್ಯಕ್ತಿ. ಮಾನಸಿಕ ಖಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದ ಇವರು ಡಿ.೧೮ ರಂದು ಆಕಸ್ಮಿಕವಾಗಿ ಇಲಿಗೆ ಹಾಕುವ ವಿಷ ಪದಾರ್ಥ ಸೇವಿಸಿದ್ದಾರೆ.
ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಶುಕ್ರವಾರ ಮೃತಪಟ್ಟಿದ್ದಾರೆ.
Advertisement. Scroll to continue reading.
ಈ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.