Connect with us

Hi, what are you looking for?

ಕರಾವಳಿ

ಹಿರಿಯಡಕ : ಮನೆಯ ಕೊಟ್ಟಿಗೆಗೆ ಬೆಂಕಿ; ನೊಂದು ವ್ಯಕ್ತಿ ಆತ್ಮಹತ್ಯೆ

3

ಹಿರಿಯಡಕ : ಮನೆಯ ಕೊಟ್ಟಿಗೆಗೆ ಬೆಂಕಿ ಬಿದ್ದ ಹಿನ್ನೆಲೆ ನೊಂದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಿರಿಯಡಕದ ಬೊಮ್ಮಾರಬೆಟ್ಟು ಗ್ರಾಮದಲ್ಲಿ ನಡೆದಿದೆ.

ಹಳೆ ಕೊಲ್ಯಾರು ನಿವಾಸಿ ಶಾಂತೇಶ್ ಶೆಟ್ಟಿ(59) ಆತ್ಮಹತ್ಯೆ ಮಾಡಿಕೊಂಡವರು. ಅವರ ಮನೆಯು ಹಳೆಯ ಮನೆಯಾಗಿದ್ದು  ಮನೆಯನ್ನು ಕಳೆದ ಎರಡು ವಾರಗಳ ಹಿಂದೆ ರಿಪೇರಿ ಕೆಲಸ ಮಾಡಿಕೊಂಡಿದ್ದರು. ಡಿಸೆಂಬರ್ 9 ರಂದು ಮನೆಯ ಬಳಿಯಲ್ಲಿರುವ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಹೋಗಿದ್ದು , ಕೊಟ್ಟಗೆಯಲ್ಲಿದ್ದ ತೆಂಗಿನಕಾಯಿ ಹಾಗೂ ಬೈಹುಲ್ಲು ಸಂಪೂರ್ಣ ಸುಟ್ಟು ಹೋಗಿದೆ.

ಹೀಗಾಗಿ ಶಾಂತೇಶ್ ಚಿಂತಕ್ರಾಂತರಾಗಿದ್ದು, ಇದೇ ವಿಚಾರದಲ್ಲಿ ಮಾನಸಿಕವಾಗಿ ನೊಂದು ಡಿ.11ರ ರಂದು ರಾತ್ರಿ 10:00 ಗಂಟೆಯಿಂದ  ಡಿ.12  ರಂದು ಬೆಳಿಗ್ಗೆ 7 ಗಂಟೆಯ ಮಧ್ಯೆ  ಅವಧಿಯಲ್ಲಿ ಮನೆಯ ಹಿಂಬದಿಯಲ್ಲಿರುವ ಹಲಸಿನ ಮರದ ಕೊಂಬೆಗೆ ನೈಲಾನ್ ಹಗ್ಗದಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

Advertisement. Scroll to continue reading.

ಈ ಬಗ್ಗೆ ಹಿರಿಯಡಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ ತಡೆ ಸಹಾಯವಾಣಿ :

COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ SAHAIHELPLINE@GMAIL.COM

ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

2 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!