ಬೆಂಗಳೂರು : ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 74 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಅಲ್ಲದೇ ಸೋಂಕಿತರಾದಂತ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋವಿಡ್ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.
ಅದರಲ್ಲಿ ಕಳೆದ 24 ಗಂಟೆಯಲ್ಲಿ ಆರ್ ಟಿ ಪಿಸಿಆರ್ ಮೂಲಕ 4680, RAT ಪರೀಕ್ಷೆ ಮೂಲಕ 1723 ಮಂದಿ ಸೇರಿದಂತೆ 6403 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಯಿತು. ಇವರಲ್ಲಿ 74 ಮಂದಿಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ. ಹೀಗಾಗಿ ಸಕ್ರಿಯ ಸೋಂಕಿತರ ಸಂಧ್ಯೆ 464 ಏರಿಕೆಯಾಗಿದೆ.
ಯಾವ ಜಿಲ್ಲೆಯಲ್ಲಿ ಎಷ್ಟು?
ಅಂದಹಾಗೆ ಕಳೆದ 24 ಗಂಟೆಯಲ್ಲಿ ಬೆಂಗಳೂರಲ್ಲಿ 57, ಬೆಂಗಳೂರು ಗ್ರಾಮಾತಂರ 4, ಚಿಕ್ಕಬಳ್ಳಾಪುರ 3, ಹಾಸನ 4, ಮಂಡ್ಯ ಮತ್ತು ಮೈಸೂರಿನಲ್ಲಿ ತಲಾ ಇಬ್ಬರು, ವಿಜಯನಗರ ಹಾಗೂ ಚಾಮರಾಜನಗರದಲ್ಲಿ ತಲಾ ಒಬ್ಬರು ಸೇರಿದಂತೆ 74 ಮಂದಿಗೆ ಕೊರೋನಾ ದೃಢಪಟ್ಟಿದೆ.
ಇಬ್ಬರು ಸಾವು :
464 ಸಕ್ರೀಯ ಕೋವಿಡ್ ಸೋಂಕಿತರಲ್ಲಿ 423 ಮಂದಿ ಹೋಂ ಐಸೋಲೇಷನ್ ಆಗಿದ್ದರೇ, 41 ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 16 ಮಂದಿ ಐಸಿಯು ಹಾಗೂ 25 ಜನರು ಜನರಲ್ ಐಸೋಲೇಷನ್ ಬೆಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕೋವಿಡ್ ಸೋಂಕಿತನಿಂದ ಚಿಕಿತ್ಸೆ ಪಡೆಯುತ್ತಿದ್ದಂತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಬ್ಬರು, ಮೈಸೂರಲ್ಲಿ ಒಬ್ಬರು ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ.