ದೆಹಲಿ : ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷರಾಗಿ ಸಂಜಯ್ ಸಿಂಗ್ ಆಯ್ಕೆ ಮಾಡಿರುವುದನ್ನು ವಿರೋಧಿಸಿ ಇದೀಗ ಮತ್ತೊಬ್ಬ ಕುಸ್ತಿ ಪಟು ಪ್ರಶಸ್ತಿ ಹಿಂತಿರುಗಿಸುವುದಾಗಿ ಹೇಳಿದ್ದಾರೆ.
ಹೌದು, ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಮತ್ತು ಅರ್ಜುನ ಪ್ರಶಸ್ತಿಗಳನ್ನು ಹಿಂದಿರುಗಿಸುವುದಾಗಿ ಕುಸ್ತಿಪಟು ವಿನೇಶ್ ಫೋಗಟ್ ಅವರು ಮಂಗಳವಾರ ಘೋಷಿಸಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ ಪ್ರಧಾನಿ ಮೋದಿ ಅವರಿಗೆ ಬಹಿರಂಗ ಪತ್ರ ಬರೆದಿರುವ ಅವರು, ನಾನು ನನ್ನ ಮೇಜರ್ ಧ್ಯಾನ್ ಚಂದ್ ಮತ್ತು ಖೇಲ್ ರತ್ನ ಪ್ರಶಸ್ತಿಗಳನ್ನು ಹಿಂದಿರುಗಿಸುತ್ತಿದ್ದೇನೆ. ನನ್ನನ್ನು ಈ ಪರಿಸ್ಥಿತಿಗೆ ತಂದಿದ್ದಕ್ಕಾಗಿ ‘ಪ್ರಭಾವಿ’ಗಳಿಗೆ ಧನ್ಯವಾದಗಳು ಎಂದಿದ್ದಾರೆ.
Advertisement. Scroll to continue reading.
ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಅವರ ಆಯ್ಕೆಯನ್ನು ಪ್ರತಿಭಟಿಸಿ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ಕ್ರೀಡೆಗೆ ವಿದಾಯ ಹೇಳಿದ್ದರು. ಬಜರಂಗ್ ಪುನಿಯಾ ಅವರುಪದ್ಮಶ್ರೀಯನ್ನು ಹಿಂದಿರುಗಿಸಿದ್ದಾರೆ. ಇದೀಗ ಫೋಗಟ್ ಅವರ ಘೋಷಣೆ ಕೇಳಿ ಬಂದಿದೆ.
Advertisement. Scroll to continue reading.
In this article:brij bhushan Sharan Singh, Diksoochi news, PM Modi, Sanjay Singh, WFI, Wrestler Vinesh Phogat, x
Click to comment