ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಆರ್ಭಟಿಸಲು ಶುರುವಿಟ್ಟಿದೆ. ಜೆಎನ್.1 ಕೋವಿಡ್ ಉಪತಳಿ ಸೋಂಕು ಹೆಚ್ಚುತ್ತಿದೆ.
ಹೀಗಾಗಿ ಜನವರಿ 2ರಿಂದ ರಾಜ್ಯದಲ್ಲಿ ಮತ್ತೆ ಕೋವಿಡ್ ವ್ಯಾಕ್ಸಿನ್ ಅಭಿಯಾನ ಶುರು ಮಾಡಲು ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ.30 ಸಾವಿರ ಕೋರ್ಬಿವಾಕ್ಸ್ ಲಸಿಕೆ ಖರೀದಿಗೆ ರಾಜ್ಯ ಸರ್ಕಾರ ನಿರ್ಧರಿಸಿದೆ.
ರಾಜ್ಯಾದ್ಯಂತ ಉಚಿತ ಕೋರ್ಬಿವ್ಯಾಕ್ಸ್ ಲಸಿಕೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಲಸಿಕೆ ನೀಡುವಂತೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ಸಲಹೆ ನೀಡಿದೆ. ಹಾಗಾಗಿ ರಾಜ್ಯದಲ್ಲಿ ಲಸಿಕೆ ಅಭಿಯಾನ ಶುರುಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.
ಈಗಾಗಲೇ ರಾಜ್ಯದಲ್ಲಿ ಮೊದಲ ಮತ್ತು ಎರಡನೇ ಡೋಸ್ 100% ವ್ಯಾಕ್ಸಿನೇಶನ್ ಆಗಿದೆ. ರಾಜ್ಯದಲ್ಲಿ ಇನ್ನು 1.5 ಕೋಟಿಗೂ ಅಧಿಕ ಜನರು ಮುನ್ನೆಚ್ಚರಿಕಾ ವ್ಯಾಕ್ಸಿನ್ ಪಡೆಯಬಹುದಾಗಿದೆ. 1.5 ಕೋಟಿ ಜನರು ಮೂರನೇ ಡೋಸ್ ವ್ಯಾಕ್ಸಿನ್ ತಗೆದುಕೊಂಡಿಲ್ಲ.
ಸದ್ಯ 15,800 ಲಸಿಕೆ ಈಗಾಗಲೇ ಖರೀದಿ ಮಾಡಲಾಗಿದೆ. ಇಂದಿನಿಂದಲೇ ಲಸಿಕೆಗಳನ್ನ ರಾಜ್ಯದಲ್ಲಿ ಎಲ್ಲ ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆಗಳಿಗೆ ವ್ಯಾಕ್ಸಿನ್ ನೀಡಲು ಪ್ಲಾನ್ ಮಾಡಿದೆ. ಹೀಗಾಗಿ ಈಗ ಮತ್ತೆ ಯಾರು ಲಸಿಕೆ ಪಡೆದಿಲ್ಲ ಅವರೆಲ್ಲ ಮುನ್ನೆಚ್ಚರಿಕಾ ದೃಷ್ಠಿಯಿಂದ ವ್ಯಾಕ್ಸಿನ್ ಪಡೆಯುವಂತೆ ಸೂಚಿಸಿದೆ.
ಕೋಮಾರ್ಬಿಟಿಸ್ ಹಾಗೂ ಗಂಭೀರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವವರು ಮೂರನೇ ಡೋಸ್ ಪಡೆಯುವಂತೆ ಆರೋಗ್ಯ ಇಲಾಖೆ ಮನವಿ ಮಾಡಿದೆ.