ಅಯೋಧ್ಯಾ : ಅಯೋಧ್ಯೆ ವಿಮಾನ ನಿಲ್ಧಾಣಕ್ಕೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬರಮಾಡಿಕೊಂಡರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಅಯೋಧ್ಯಾ ಧಾಮ್ ರೈಲು ನಿಲ್ದಾಣವನ್ನು ಉದ್ಘಾಟನೆ ಮಾಡಿದರು. ನಂತರ ಉತ್ತರ ಪ್ರದೇಶದ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಇನ್ನು ಇದರೊಂದಿಗೆ ಮೋದಿ ಅವರು ಹೊಸ ಅಮೃತ್ ಭಾರತ್ ಮತ್ತು ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದರು.
ಸುಮಾರು ೧೫ ಕಿಲೋ ಮೀಟರ್ ದೂರ ಮೋದಿ ರೋಡ್ ಶೋ ನಡೆಸಿದರು. ಈ ಸಂದರ್ಭದಲ್ಲಿ ಅಪಾರ ಜನಸ್ತೋಮ ರಸ್ತೆಯ ಇಕ್ಕೆಲಗಳಲ್ಲಿ ಸೇರಿತ್ತು. ವಿಮಾನ ನಿಲ್ದಾಣದಿಂದ ರೈಲು ನಿಲ್ದಾಣದವರೆಗೆ ಜನರತ್ತ ಕೈ ಬೀಸುತ್ತಾ ಪ್ರಧಾನಿ ಸಾಗಿದರು.
ಪ್ರಧಾನಮಂತ್ರಿಯವರು ತಮ್ಮ ರೋಡ್‌ಶೋ ಮಾರ್ಗದಲ್ಲಿ ಸಾಂಸ್ಕೃತಿಕ ತಂಡಗಳ ಪ್ರದರ್ಶನಗಳನ್ನು ವೀಕ್ಷಿಸಿದರು.
Advertisement. Scroll to continue reading.
In this article:amruth bharath, ayodhya, ayodhya dham train, Diksoochi news, Featured, vande bharath train
Click to comment