ಕಾಪು : ಟ್ಯಾಂಕರ್ ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶನಿವಾರ ರಾತ್ರಿ ಉದ್ಯಾವರದಲ್ಲಿ ನಡೆದಿದೆ.
ಉಡುಪಿ ಕೆಮ್ತೂರು ನಿವಾಸಿ ಜಯ ದೇವಾಡಿಗ (64) ಮೃತ ವ್ಯಕ್ತಿ.
ಶನಿವಾರ ಸಂಜೆ ಕೆಲಸ ಮುಗಿಸಿ ಭಗವತಿ ಹಾರ್ಡ್‌ವೇರ್ ಮುಂಭಾಗದಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಜಯ ಅವರಿಗೆ ಉಡುಪಿ ಕಡೆಗೆ ತೆರಳುತ್ತಿದ್ದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.
Advertisement. Scroll to continue reading.
ಪಿತ್ರೋಡಿಯ ಹೋಲೋ ಬ್ಲಾಕ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಜಯ ದೇವಾಡಿಗ ಪತ್ನಿ, ಪುತ್ರ ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.