ಹೆಬ್ರಿ : ಕಾರು ಡಿಕ್ಕಿ ಹೊಡೆದು ಪಾದಚಾರಿ ಸಾವನ್ನಪ್ಪಿರುವ ಘಟನೆ ಚಾರ ಗ್ರಾಮದ ಕನ್ಯಾನದಲ್ಲಿ ಡಿ.೩೧ ರಂದು ನಡೆದಿದೆ. ಜಯಂತ ಬೋರೋ (೨೫) ಮೃತ ಯುವಕ. ಇವರು ಅಜಯ್, ಕೂನ್ ಬಸುಮಟಾರಿ ಜೊತೆ ಕನ್ಯಾನ ಕಡೆಯಿಂದ ಶಿವಪುರ ಕಡೆಗೆ ರಸ್ತೆಯ ಎಡಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು.
ಈ ವೇಳೆ ಹಿಂದಿನಿAದ ಬಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಜಯಂತ ಅವರನ್ನು ಹೆಬ್ರಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಪರೀಕ್ಷಿಸಿದ ವೈದ್ಯರು ದಾರಿ ಮಧ್ಯೆಯೇ ಮೃತಪಟ್ಟಿರುವ ಬಗ್ಗೆ ತಿಳಿಸಿದ್ದಾರೆ.
Advertisement. Scroll to continue reading.
ಕಾರು ಚಾಲಕ ಇರ್ಫಾನ್ ಖಾದರ್ ಅವರ ಅತೀ ವೇಗ ಹಾಗೂ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಈ ಬಗ್ಗೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Advertisement. Scroll to continue reading.