ಉಡುಪಿ : ಕೊವ್ಯಾಕ್ಸಿನ್ ಅಥವಾ ಕೋವಿಶಿಲ್ಡ್ 2 ನೇ ಡೋಸ್ ಲಸಿಕೆ ಪಡೆದು 6 ತಿಂಗಳು (26 ವಾರ) ಆಗಿರುವ 18 ವರ್ಷ ಮೇಲ್ಪಟ್ಟವರಿಗೆ ಕೋರ್ಬೆವ್ಯಾಕ್ಸ್ ಬೂಸ್ಟರ್ ಡೋಸ್ ಲಸಿಕೆಯು ಜನವರಿ 8 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆಯ ವರೆಗೆ ನಿಟ್ಟೆ ಸರ್ಕಾರಿ ಆರೋಗ್ಯ ಕೇಂದ್ರ ಮತ್ತು ಕೆಮ್ಮಣ್ಣು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಲಾ 20 ಹಾಗೂ ಕಾರ್ಕಳ ತಾಲೂಕು ಆಸ್ಪತೆಯಲ್ಲಿ 40 ಡೋಸ್, ಜ. 10 ರಂದು ಸಾಸ್ತಾನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 20, ಜ. 11 ರಂದು ಅಜೆಕಾರು, ಕಂಡ್ಲೂರು ಮತ್ತು ಹಟ್ಟಿಯಂಗಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಲಾ 20 ಡೋಸ್, ಜ. 12 ರಂದು ಹೆಬ್ರಿ ಸರ್ಕಾರಿ ಆರೋಗ್ಯ ಕೇಂದ್ರ ಮತ್ತು ಮಂದಾರ್ತಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಲಾ 20 ಡೋಸ್, ಜ.16 ರಂದು ಕಾಪು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಶಿರ್ವ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ತಲಾ 20 ಹಾಗೂ ಮಣಿಪಾಲ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 40 ಡೋಸ್, ಜ. 17 ರಂದು ಉಡುಪಿಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಲಾ 20 ಡೋಸ್, ಜ. 18 ರಂದು ಕೊಲ್ಲೂರು, ಕರ್ಜೆ ಮತ್ತು ಆರ್ವಸೆ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಲಾ 20 ಡೋಸ್, ಜ.20 ರಂದು ಸೈಬ್ರಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 20 ಡೋಸ್, ಜ. 22 ರಂದು ಗಂಗೊಳ್ಳಿ ಮತ್ತು ಕೊಕ್ಕರ್ಣೆ ಆರೋಗ್ಯ ಕೇಂದ್ರಗಳಲ್ಲಿ ತಲಾ 20 ಡೋಸ್, ಜ. 23 ರಂದು ಬೈಂದೂರು ಸರ್ಕಾರಿ ಆರೋಗ್ಯ ಕೇಂದ್ರದಲ್ಲಿ 20 ಡೋಸ್, ಜ.24 ರಂದು ಕೋಡಿ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಕೋಟ ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ತಲಾ 20 ಡೋಸ್, ಮತ್ತು ಜ. 31 ರಂದು ಕುಂದಾಪುರ ತಾಲೂಕು ಆಸ್ಪತ್ರೆ ಮತ್ತು ಹಾಲಾಡಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ತಲಾ 20 ಡೋಸ್ ಲಸಿಕೆ ಲಭ್ಯವಿದ್ದು, ಆನ್ಲೆöÊನ್ ಮೂಲಕ ನೋಂದಾವಣೆ ಮಾಡಿಕೊಳ್ಳಬಹುದು ಅಥವಾ ಲಸಿಕಾ ಕೇಂದ್ರಕ್ಕೆ ತೆರಳಿ ಲಸಿಕೆಯ ಲಭ್ಯತೆಯನ್ನು ಖಚಿತಪಡಿಸಿಕೊಂಡು ಲಸಿಕೆಯನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕು.ಕ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.