ಉಡುಪಿ : ಉಡುಪಿ ತಾಲೂಕು ಮೂಡನಿಡಂಬೂರು ಗ್ರಾಮದ ಹಳೆ ಕೆ.ಎಸ್.ಆರ್.ಟಿ.ಸಿ ನಿಲ್ದಾಣದ ಬಳಿ ಡಿಸೆಂಬರ್ 13 ರಂದು ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿದ್ದ ಅಪರಿಚಿತ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುತ್ತಾನೆ. ಮೃತದೇಹವನ್ನು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ವಾರಾಸುದಾರರು ಯಾರಾದರೂ ಇದ್ದಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ನಗರ ಪೊಲೀಸ್ ಠಾಣಾಧಿಕಾರಿಗಳ ಪ್ರಕಟನೆ ತಿಳಿಸಿದೆ.
Advertisement. Scroll to continue reading.