ಮಂಡ್ಯ : ಜಿಲ್ಲೆಯಲ್ಲಿ ನಡೆದಿರುವ ಘಟನೆ ಮಂಡ್ಯ ಜಿಲ್ಲೆಯನ್ನೇ ಬೆಚ್ಚಿಬೀಳಿಸುವಂತೆ ಮಾಡಿದೆ. ಒಂಟಿ ಮಹಿಳೆಯನ್ನು ಸಜೀವ ದಹನ ಮಾಡಿರುವ ಘಟನೆ ಮದ್ದೂರು ತಾಲೂಕಿನ ಮಾರಸಿಂಗನಹಳ್ಳಿಯಲ್ಲಿ ಸೋಮವಾರ ತಡರಾತ್ರಿ ನಡೆದಿದೆ.
ಮಾರಸಿಂಗನಹಳ್ಳಿ ಗ್ರಾಮದ ಪ್ರೇಮ(42) ಹತ್ಯೆಯಾಗಿರುವ ಮಹಿಳೆ. ಅವರನ್ನು ಮನೆಯಲ್ಲಿಯೇ ಬೆಂಕಿ ಹಚ್ಚಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ.
ಪತಿ ನಿಧನದ ಬಳಿಕ ಒಂಟಿಯಾಗಿದ್ದ ಪ್ರೇಮ ತಮ್ಮ ಮನೆಯಲ್ಲಿ ರಾತ್ರಿ ಕೊಲೆಯಾಗಿದ್ದಾರೆ. ಗಂಡನ ನಿಧನದ ಬಳಿಕ ಪ್ರೇಮ ಅದೇ ಊರಿನಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಪ್ರೇಮ ಅವರ ಓರ್ವ ಪುತ್ರ ಬೆಂಗಳೂರಿನಲ್ಲಿ ವಾಸವಿದ್ದಾನೆ ಎಂದು ತಿಳಿದುಬಂದಿದೆ. ಸೋಮವಾರ ರಾತ್ರಿ ತಮ್ಮ ಮನೆಯಲ್ಲಿ ಮಲಗಿದ್ದಶನಿವಾರ ಊರಿಗೆ ಬಂದಿದ್ದ ಮಗ ಸೊಸೆ ಸೋಮವಾರ ಬೆಳಿಗ್ಗೆಯಷ್ಟೇ ವಾಪಸ್ಸಾಗಿದ್ರು.

ಹಾಸಿಗೆಯಲ್ಲಿ ಸಂಪೂರ್ಣ ಸುಟ್ಟು ಹೋಗಿರುವ ಸ್ಥಿತಿಯಲ್ಲಿ ಪ್ರೇಮ ಮೃತದೇಹ ಪತ್ತೆಯಾಗಿದೆ. ಆದರೆ, ಈವರೆಗೆ ಕೊಲೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಸ್ಥಳಕ್ಕೆ ಬೆಸಗರಹಳ್ಳಿ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ತನಿಖೆ ಬಳಿಕವಷ್ಟೇ ಘಟನೆಗೆ ಕಾರಣ ತಿಳಿಯಲಿದೆ.

