ಬೆಂಗಳೂರು : ಖ್ಯಾತ ವಿದ್ವಾಂಸ, ಸಾಹಿತಿ ಪ್ರೊ.ಅಮೃತ ಸೋಮೇಶ್ವರ ಅವರು ಇಂದು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಅವರು ಪೋಸ್ಟ್ ಮಾಡಿದ್ದಾರೆ.
ಪ್ರಖ್ಯಾತ ಜಾನಪದ ವಿದ್ವಾಂಸ, ಸಂಸ್ಕೃತಿ ಚಿಂತಕ ಮತ್ತು ಶಿಷ್ಯರ ಮೆಚ್ಚಿನ ಗುರು ಪ್ರೊ.ಅಮೃತ ಸೋಮೇಶ್ವರ ಅವರ ನಿಧನದಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.
ಅವರ ಕುಟುಂಬ ಸದಸ್ಯರು ಮತ್ತು ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ.
ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದು,
ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಸಾಹಿತಿ, ಯಕ್ಷಗಾನ ಪ್ರಸಂಗಕರ್ತ, ಕನ್ನಡ, ತುಳು ಭಾಷೆ ಹಾಗೂ ಸಾಹಿತ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದ ಸಮಾಜಮುಖಿ ಚಿಂತಕ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪ್ರೊ. ಅಮೃತ ಸೋಮೇಶ್ವರ ಅವರು ನಿಧನ ಹೊಂದಿದ ವಿಷಯ ತಿಳಿದು ಅತ್ಯಂತ ದುಃಖವಾಯಿತು.
ನೂರಾರು ಮಂದಿಗೆ ಕಲೆ, ಸಾಹಿತ್ಯ, ಸಂಶೋಧನಾಸಕ್ತರಿಗೆ ಸದಾ ಕಾಲ ಪ್ರೇರಕ, ಮಾರ್ಗದರ್ಶಕರಾಗಿದ್ದ, ಜಾನಪದ ವಿದ್ವಾಂಸ ಪ್ರೊ. ಅಮೃತ ಸೋಮೇಶ್ವರ ಅವರ ಅಗಲಿಕೆಯು ನಾಡಿಗೆ ತುಂಬಲಾರದ ನಷ್ಟ.
ಮೃತರ ಕುಟುಂಬ, ಶಿಷ್ಯ ವೃಂದಕ್ಕೆ ಅವರ ಅಗಲುವಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಎಕ್ಸ್‌ನಲ್ಲಿ ಸಂತಾಪ ಸೂಚಿಸಿದ್ದು,
ನಾಡುಕಂಡ ಖ್ಯಾತ ಸಾಹಿತಿ ಪ್ರೊ. ಅಮೃತ ಸೋಮೇಶ್ವರ ಅವರ ನಿಧನದಿಂದ ನಾಡಿನ ಸಾಹಿತ್ಯ ಕ್ಷೇತ್ರಕ್ಕೆ ತುಂಬಲಾರದ ನಷ್ಟವಾಗಿದೆ. ಕಾವ್ಯ, ನಾಟಕ, ಯಕ್ಷಗಾನ ಹಾಗೂ ಜಾನಪದ ಕ್ಷೇತ್ರಕ್ಕೆ ತಮ್ಮದೇ ಆದ ಅನನ್ಯ ಕೊಡುಗೆ ನೀಡಿದ್ದಾರೆ. ಅವರ ಕುಟುಂಬಸ್ಥರಿಗೆ ಹಾಗೂ ಅಪಾರ ಸಾಹಿತ್ಯಾಸಕ್ತ ವರ್ಗದವರಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಕರುಣಿಸಲಿ. ಅವರ ಆತ್ಮಕ್ಕೆ ಚಿರಶಾಂತಿ ದೊರೆಯಲಿ.
ಓಂಶಾಂತಿ ಎಂದು ಬರೆದುಕೊಂಡಿದ್ದಾರೆ. ಆರ್.ಅಶೋಕ್,ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವರು ಸಂತಾಪ ಸೂಚಿಸಿದ್ದಾರೆ.