ಉಡುಪಿ : ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳಿಗೆ, ಜನನ ಮರಣ ನೋಂದಾಣಾಧಿಕಾರಿಗಳಿಗೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿಗಳಿಗೆ ಹಾಗೂ ಸರ್ಕಾರೇತರ ಮಕ್ಕಳ ಪಾಲನಾ ಸಂಸ್ಥೆಗಳ ಮುಖ್ಯಸ್ಥರುಗಳಿಗೆ ಬಾಲನ್ಯಾಯ ಕಾಯ್ದೆ 2015 ಮತ್ತು ತಿದ್ದುಪಡಿ 2021 ಹಾಗೂ ಮಕ್ಕಳಿಗೆ ಸಂಬAಧಿಸಿದ ಕಾಯ್ದೆಗಳ ಕುರಿತು ತರಬೇತಿ ಕಾರ್ಯಾಗಾರವು ಜನವರಿ 8 ರಂದು ಬೆಳಗ್ಗೆ 10 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆಯಲಿದೆ.
ಕಾರ್ಯಾಗಾರವನ್ನು ಜಿಲ್ಲಾ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ವಿಘ್ನೇಶ್ ಕುಮಾರ್ ಉದ್ಘಾಟಿಸಲಿದ್ದು, ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಅಧ್ಯಕ್ಷತೆ ವಹಿಸಲಿದ್ದಾರೆ.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಸನ್ನ ಹೆಚ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ, ಹಿರಿಯ ಸಿವಿಲ್ ನ್ಯಾಯಧೀಶೆ ಶರ್ಮಿಳಾ ಎಸ್, ಜಿಲ್ಲಾ ಬಾಲನ್ಯಾಯ ಮಂಡಳಿ ಪ್ರಧಾನ ನ್ಯಾಯಾಧೀಶ ಸೋಮನಾಥ, ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರೊನಾಲ್ಡ್ ಬಿ. ಪುರ್ಟಾಡೊ, ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ, ಬೆಂಗಳೂರು ಯುನಿಸೆಫ್ ಕನ್ಸಲ್ಟೆಂಟ್ ಸಿ.ದುಲ್ಸಿನ ಕ್ರಾಸ್ತಾ, ನ್ಯಾಯಾವಾದಿ ವಿಜಯ ವಾಸು ಪೂಜಾರಿ, ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ವಿಭಾಗದ ಉಪನ್ಯಾಸಕಿ ಡಾ.ಪ್ರಮೀಳಾ ವಾಜ್, ಮಣಿಪಾಲ ಪೊಲೀಸ್ ಠಾಣಾ ಉಪನಿರೀಕ್ಷಕ ದೇವರಾಜ್ ಟಿ.ವಿ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.