Connect with us

Hi, what are you looking for?

ಸಿನಿಮಾ

ಸಾಹಸಸಿಂಹ ಡಾ.ವಿಷ್ಣುವರ್ಧನ್ ಅಭಿಮಾನಿಗಳಿಗೆ ಸಿಹಿಸುದ್ದಿ; ದಾದಾ ಸ್ಮಾರಕ ಉದ್ಘಾಟನೆಗೆ ದಿನಾಂಕ ನಿಗದಿ

0

ಬೆಂಗಳೂರು : ಚಂದನವನದ ಸಾಹಸ ಸಿಂಹ ಡಾ.ವಿಷ್ಣುವರ್ಧನ್ ಅವರ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಹೌದು,ವಿಷ್ಣುದಾದ ಸ್ಮಾರಕ ಉದ್ಘಾಟನೆಗೆ ಕೊನೆಗೂ ದಿನಾಂಕ ನಿಗದಿಯಾಗಿದೆ.

ಇದೇ ತಿಂಗಳು ಅಂದರೆ ಜನವರಿ 29 ರಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಸ್ಮಾರಕ ಲೋಕಾರ್ಪಣೆ ಮಾಡಲಿದ್ದಾರೆ.

ಮೈಸೂರಿನ ಹೆಚ್.ಡಿ ಕೋಟೆ ಅಲ್ಲಾಳು ಗ್ರಾಮದಲ್ಲಿ‌ ಐದು ಎಕರೆ ಜಾಗದಲ್ಲಿ ಸ್ಮಾರಕವನ್ನು ನಿರ್ಮಿಸಲಾಗಿದೆ. ಸ್ಮಾರಕದಲ್ಲಿ ವಿಷ್ಣುವರ್ಧನ್ ಅವರಿಗೆ ಸಂಬಂಧಿಸಿದ ಗ್ಯಾಲರಿ, ಆಡಿಟೋರಿಯಂ, ವಿಷ್ಣು ಪುತ್ಥಳಿ, ಕ್ಲಾಸ್ ರೂಮ್, ಕ್ಯಾಂಟೀನ್ ಏರಿಯಾ ಒಳಗೊಂಡಿದೆ.

Advertisement. Scroll to continue reading.

ವಿಷ್ಣು ದಾದಾ ಅಗಲಿದ 13 ವರ್ಷಗಳ ಬಳಿಕ ಸ್ಮಾರಕ ನಿರ್ಮಾಣವಾಗಿದೆ. 2020 ರ ಸೆ‌.15 ರಂದು ಸ್ಮಾರಕಕ್ಕೆ ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸ್ಮಾರಕಕ್ಕೆ ಭೂಮಿ‌ ಪೂಜೆ ನೆರವೇರಿಸಿದ್ದರು. ಸ್ಮಾರಕ ನಿರ್ಮಾಣಕ್ಕೆ ಸರ್ಕಾರದಿಂದ ಆಗಲೇ 11 ಕೋಟಿ ರೂಪಾಯಿ ಮಂಜೂರು ಮಾಡಲಾಗಿತ್ತು. ಸುಮಾರು 13 ವರ್ಷಗಳ ಬಳಿಕ ಸ್ಮಾರಕ ಉದ್ಘಾಟನೆ ಆಗುತ್ತಿದೆ. ಹೀಗಾಗಿ ಈ ದಿನಕ್ಕಾಗಿ ಕಾಯುತ್ತಿದ್ದ ವಿಷ್ಣುದಾದ ಅಭಿಮಾನಿಗಳಿಗೆ ಫುಲ್ ಖುಷಿಯಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!