Connect with us

Hi, what are you looking for?

ರಾಜ್ಯ

ಮದ್ದೂರು ತಾಲೂಕು ಕಚೇರಿ ಆವರಣದಲ್ಲೇ ಹಾಡಹಗಲೇ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ

2

ಮಂಡ್ಯ: ವ್ಯಕ್ತಿಯೊಬ್ಬರ ಮೇಲೆ ಕುಡುಗೋಲಿನಿಂದ ಮಾರಣಾಂತಿಕ ಹಲ್ಲೆಗೆ ಯತ್ನಿಸಿದ ಘಟನೆ ಮದ್ದೂರು ತಾಲೂಕು ಕಚೇರಿಯಲ್ಲಿ ನಡೆದಿದೆ.
ಮರಳಿಗ ಗ್ರಾಮದ ಚನ್ನರಾಜು (45) ಎಂಬುವವರು ಹಲ್ಲೆಗೊಳಗಾದವರು. ಅದೇ ಗ್ರಾಮದ ನಂದನ್ ಎಂಬುವವರು ಕುಡುಗೋಲಿನಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ.
ಮದ್ದೂರು ತಾಲೂಕು ಕಚೇರಿಯ ಮೊದಲ ಮಹಡಿಯಲ್ಲಿ ಜಗಳ ತೆಗೆದ ನಂದನ್‌ ಚನ್ನರಾಜು ಮೇಲೆ ಕುಡುಗೋಲಿನಿಂದ ಮನಬಂದಂತೆ ಹಲ್ಲೆ ಮಾಡಿದ್ದಾನೆ. ಸದ್ಯ ಹಲ್ಲೆಗೊಳಗಾದ ಚನ್ನರಾಜುನನ್ನು ಚಿಕಿತ್ಸೆಗಾಗಿ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮದ್ದೂರು ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮಗಳ ಮದುವೆ ವಿಚಾರಕ್ಕೆ ಗಲಾಟೆ :

ಕಳೆದ ಎರಡು ವರ್ಷಗಳ ಚನ್ನರಾಜು ತನ್ನ ಮಗಳನ್ನು ಬೇರೆಯವರಿಗೆ ಮದುವೆ ಮಾಡಿಸಿದ ಕಾರಣಕ್ಕೆ, ಇವರಿಬ್ಬರ ನಡುವೆ ಹಳೇ ದ್ವೇಷ ಬೆಳೆದಿತ್ತು ಎನ್ನಲಾಗಿದೆ. ಆಗಿನಿಂದ ಇವರಿಬ್ಬರು ಸಣ್ಣಪುಟ್ಟ ಜಗಳವಾಡುತ್ತಿದ್ದರು. ಇದೇ ವಿಚಾರವನ್ನಿಟ್ಟುಕೊಂಡು ನಂದನ್ ಇಂದು ಮದ್ದೂರು ತಾಲೂಕು ಕಚೇರಿ ಬಳಿ ಕಾದು ಮಚ್ಚೆನಿಂದ ಹಲ್ಲೆ ಮಾಡಿದ್ದಾನೆ. ಈ ಹಲ್ಲೆಯ ವಿಡಿಯೋ ಸಿಸಿಟಿವಿಯಲ್ಲಿ ಸೆರೆ ಆಗಿದೆ. ಇನ್ನು ಘಟನೆ ಮದ್ದೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ತಕ್ಷಣ ಘಟನಾ ಸ್ಥಳಕ್ಕೆ ಆಗಮಿಸಿದ ಸರ್ಕಲ್ ಇನ್ಸ್‌ಪೆಕ್ಟರ್ ಮನೋಜ್ ಪರಿಸ್ಥಿತಿಯನ್ನು ನಿಯಂತ್ರಿಸಲು ಬಿಗಿ ಬಂದೋ ಬಸ್ತ್ ಕಲ್ಪಿಸಿದ್ದಾರೆ.

Advertisement. Scroll to continue reading.

ಅಲ್ಲಿನ ಸ್ಥಳೀಯರು ಮಾರಣಾಂತಿಕ ಹಲ್ಲೆ ನಡೆಸದಂತೆ ನಂದನ್‌ಗೆ ತಿಳಿ ಹೇಳಿದರೂ ಕೂಡ ಆತ ಕೇಳುವ ಪರಿಸ್ಥಿತಿಯಲ್ಲಿ ಇರಲಿಲ್ಲ.
ಕೊನೆಗೆ ಅಲ್ಲಿದ್ದ ಸ್ಥಳೀಯರು ನಂದನ್ ಮೇಲೆ ಕಲ್ಲು ತೂರಿ ಮಾರಣಾಂತಿಕ ಹಲ್ಲೆಯನ್ನು ತಡೆದಿದ್ದಾರೆ ಎನ್ನಲಾಗಿದೆ.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

1 ಉಡುಪಿ : 14 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿರುವ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿ ತಂದೆ – ಮಗನನ್ನು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಶಿವಶಂಕರ್(58) ಮತ್ತು ಆತನ ಮಗ ಸಚಿನ್(28)...

Uncategorized

1 ಉಡುಪಿ : ಜಿಲ್ಲೆಯ ಹಲವು ಶಾಲೆಗಳಲ್ಲಿ ಮತಗಟ್ಟೆಗಳು ಇದ್ದವು. ಮತದಾರರು ಮತ ಚಲಾಯಿಸಿದ್ದರು. ಆದರೆ, ಈ ಶಾಲೆಯ ಸೊಬಗ ಕಂಡು ಬೆರಗಾದವರೇ ಹೆಚ್ಚು. ಹೌದು, ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕದಲ್ಲಿ ಬೊಮ್ಮಾರಬೆಟ್ಟು...

Uncategorized

1 ಕೋಟ: ಕಳೆದ ವಾರ ಸಾಲಿಗ್ರಾಮ ದೇವಳದ ಅನ್ನದಾನಕ್ಕೆ ಭಿಕ್ಷಾಟನೆ ಮಾಡಿ ಸಂಗ್ರಹಿಸಿದ್ದ 1ಲಕ್ಷ ರೂ ನೀಡಿದ ಅಜ್ಜಿ ಮಂಗಳವಾರ ಶ್ರೀ ಗುರುನರಸಿಂಹನ ಸನ್ನಿಧಿಯಲ್ಲಿ ಪೊಳಲಿಯ ನಾಗೇಶ ಗುರುಸ್ವಾಮಿ ನೇತೃತ್ವದಲ್ಲಿ ಇರುಮುಡಿ ಕಟ್ಟಿ...

Uncategorized

1 ಬ್ರಹ್ಮಾವರ : ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದಂತೆ ಬ್ರಹ್ಮಾವರ ಪೊಲೀಸ್ ಠಾಣೆಗೆ ಕೋವಿಡ್ 19 ಲಾಕ್ ಡೌನ್ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಟಾಸ್ಕ್ ಪೋರ್ಸ್ ಸದಸ್ಯರೊಂದಿಗೆ ಪೊಲೀಸ್ ವಾಹನದೊಂದಿಗೆ ನೆರವಿಗೆ ಸ್ಪಂದಿಸಲಿದ್ದೇವೆ.ಸಾರ್ವಜನಿಕರಿಗೆ...

error: Content is protected !!