ಬೆಂಗಳೂರು: ರಾಜ್ಯದಲ್ಲಿ ಬುಧವಾರ 201 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 974ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 201 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಸೋಂಕಿನಿಂದ ಇಂದು ಒಬ್ಬರು ಮೃತಪಟ್ಟಿದ್ದಾನೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಕೋವಿಡ್ ನಿಂದ 257 ಮಂದಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 7,315 ಮಂದಿಗೆ ಕೊರೋನಾ ಟೆಸ್ಟ್ ಮಾಡಲಾಗಿದೆ. ಪಾಸಿಟಿವಿಟಿ ದರ ಶೇ. 2.74ರಷ್ಟಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿಯೇ ಇಂದು 121 ಜನರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಇನ್ನುಳಿದಂತೆ ಮೈಸೂರು 10, ತುಮಕೂರು 14, ಧಾರವಾಡ 3 ಪ್ರಕರಣ ಸೇರಿದಂತೆ ಒಟ್ಟು 201 ಪ್ರಕರಣಗಳು ವರದಿಯಾಗಿವೆ. ಮೈಸೂರಿನಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.